ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಜಯಕರ್ನಾಟಕ ಸಂಘಟನೆ ವಿರುದ್ಧ ಕ್ರಮಕ್ಕೆ ಒತ್ತಾಯ

Mainashree
Updated On : 31 Aug 2013, 10:55 am

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಆ.30
ತಾಲೂಕಿನ ಆನಾಹೊಸೂರು ಗ್ರಾಪಂ ಪಿಡಿಒ ಅವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಜರಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಪಂ ಉಪಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಜಯ ಕರ್ನಾಟಕ ಸಂಘಟನೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೇಲೆ ವಿನಾಕಾರಣ ಕಿರುಕುಳ ನೀಡುತ್ತಾ ಬಂದಿದ್ದು, ಈ ಹಿಂದೆ ಸಂಘಟನೆಯಿಂದ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ಕೇಳಿದಷ್ಟು ಹಣ ನೀಡಲಿಲ್ಲ. ಗ್ರಾಪಂ ಸದಸ್ಯರಾದ ಹನುಮವ್ವ ಬೆಂಡೋಣಿ ಅವರು ತಮ್ಮ ಅಪ್ರಾಪ್ತ ಮಗನ ಹೆಸರಲ್ಲಿ ಮನೆ ನೀಡಲಿಲ್ಲ ಎಂಬ ಕಾರಣಕ್ಕಾಗಿ ಇವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆಂದು ದೂರಿದರು.
ಸಂಘಟನೆಯವರು ವಿನಾ ಕಾರಣ ಪಿಡಿಒ, ಸರ್ಕಾರಿ ನೌಕರರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದು, ಇದರಿಂದ ನೌಕರರು ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಪಿಡಿಒಗಳಿಗೆ ಈ ಹಿಂದಿನಿಂದಲೂ ಜನಪ್ರತಿನಿಧಿಗಳು ಕಿರುಕುಳ ನೀಡುತ್ತಿದ್ದು, ನೊಂದ ಕೆಲ ಅಧಿಕಾರಿಗಳು ಹುದ್ದೆಗೆ ರಾಜಿನಾಮೆ ನೀಡುತ್ತಿದ್ದಾರೆ. ಕೂಡಲೇ ಸಂಘಟನೆ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಭೀಮಣ್ಣ ನಾಯಕ, ಪಂಚಾಯತ್ ರಾಜ್ ಇಲಾಖೆ ನೌಕರರ ಸಂಘದ ಅಧ್ಯಕ್ಷ ಸುಶೀಲ ಕುಮಾರ, ನೌಕರರಾದ ಚಂದ್ರಶೇಖರ, ವೀರಣ್ಣ, ವಿರೇಶ ಬನ್ನಿಗೋಳ, ಜ್ಯೋತಿರಾಣಿ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement