ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Rashmi Kasaragodu
Updated On : 1 Sept 2013, 11:42 am

ಸಿಂಧನೂರು: ಗೋಹತ್ಯೆ ನಿಷೇಧ ಮಸೂದೆ ವಾಪಸ್ ಪಡೆದಿರುವ ಸರ್ಕಾರದ ದೋರಣೆಯನ್ನು ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಮೆರವಣಿಗೆ ಶನಿವಾರ ನಡೆಸಲಾಯಿತು.
ಕೊಪ್ಪಳ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕೊಲ್ಲಾ ಶೇಷಗಿರಿರಾವ್ ಮಾತನಾಡಿ, ಭಾರತೀಯ ಸಂಸ್ಕೃತಿಯ ಪ್ರಕಾರ ಪ್ರತಿಯೊಬ್ಬರು ಗೋವನ್ನು ಪೂಜಿಸಿ, ಸಲಹಬೇಕು. ಅದು ಭಾರತೀಯ ಪ್ರಜೆಯ ಕರ್ತವ್ಯ. ಆದರೆ ಈ ಬಾರಿ ಕಾಂಗ್ರೆಸ್ ಸರ್ಕಾರವು ಮಾನವೀಯತೆ ಗುಣ ಮರೆತು ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿಗೆ ತರದೇ, ಕಾಂಗ್ರೆಸ್ನ ಇನ್ನೊಂದು ಮುಖವನ್ನು ಬಯಲು ಮಾಡಿದೆ. ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಎನ್. ಶಿವನಗೌಡ ಗೊರೇಬಾಳ ಮಾತನಾಡಿದರು.
ಬಿಜೆಪಿ ತಾಲೂಕಧ್ಯಕ್ಷ ದೇವೇಂದ್ರಪ್ಪ ಯಾಪಲಪರ್ವಿ, ನಗರ ಘಟಕ ಅಧ್ಯಕ್ಷ ಮಧ್ವಚಾರ್ಯ ತಹಸೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.
ಪ್ರಧಾನ ಕಾರ್ಯದರ್ಶಿ ನಾಗೇಂದ್ರ ರೆಡ್ಡಿ, ಯುವಮೋರ್ಚ ಅಧ್ಯಕ್ಷ ದೊರೆಬಾಬೂ, ನಗರ ಯುವಮೋರ್ಚ ಅಧ್ಯಕ್ಷ ಬಸವರಾಜ ಮಹಾದೇವ ನಾಯಕ, ಅಶೋಕ ಉಮಲೂಟಿ, ಹನುಮೇಶ, ಸಂಗಮೇಶ, ಎನ್.ಸುಬ್ಬರಾವ್, ಹಂಬಣ್ಣ, ಚನ್ನನಗೌಡ, ಮಂಜುನಾಥ ಮತ್ತಿತರರು ಭಾಗವಹಿಸಿದ್ದರು. ಇದಕ್ಕೂ ಮುಂಚಿತ ಪ್ರವಾಸಿ ಮಂದಿರದಿಂದ ಮಹಾತ್ಮ ಗಾಂಧಿ ವೃತ್ತದ ಮೂಲಕ ಮೆರವಣಿಗೆ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement