ತಾಪಂ ಇಒ ಅಮಾನತು
ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಸ್ಥಳೀಯ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಪೋಂ ಸಿಂಗ್ ಅವರನ್ನು ಅಮಾನತುಗೊಳಿಸಿ ಜಿಪಂ ಸಿಇಒ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಶನಿವಾರ ಆದೇಶ ಹೊರಡಿಸಿರುವ ಜಿಪಂ ಸಿಇಒ ಡಾ. ಮುದ್ದುಮೋಹನ್ ಅವರು, ತಾಪಂ ಕಾರ್ಯನಿರ್ವಹಣಾಧಿಕಾರಿಪೋಂ ಸಿಂಗ್ ಅವರು ಉದ್ಯೋಗ ಖಾತ್ರಿ ಸೇರಿ ಮತ್ತಿತರೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.