ಅವಧಿ ವಿಸ್ತರಣೆ
ಲಿಂಗಸ್ಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಅವಧಿ ಡಿ.6 ರ ವರೆಗೆ ವಿಸ್ತರಿಸಲಾಗಿದೆ ಎಂದು ತಹಲ್ದಾರ್ ಜಿ.ಎಸ್. ಮಹಾಜನ್ ತಿಳಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಅವಧಿ ವಿಸ್ತರಿಸಲಾಗಿದ್ದು, ಅರ್ಹ ಮತದಾರರು ಇದರ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದ್ದಾರೆ.
ಜನಸ್ಪಂದನ ಸಭೆ
ರಾಯಚೂರು: ತಾಲೂಕಿನ ಗುಂಜಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.7ರಂದು ಜನಸ್ಪಂದನ ಸಭೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಗ್ರಾಮದಲ್ಲಿ ಜನಸ್ಪಂದನ ಸಭೆಯನ್ನು ಆಯೋಜಿಸಿದ್ದು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ತಪ್ಪದೇ ಹಾಜರಿರಲು ತಹಸೀಲ್ದಾರರ ಕಚೇರಿ ತಿಳಿಸಿದೆ.
--