ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ: ನಿಯಂತ್ರಣಕ್ಕೆ ಶಿರಸೇದಾರರಿಗೆ ಒತ್ತಾಯ

Lingaraj Badiger
Updated On : 2 Dec 2013, 11:45 am

ಸಿಂಧನೂರು: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಾದಿಕಾರಿಗಳು ಹಾಗೂ ಸಿಬ್ಬಂದಿಗೆ ಸಾರ್ವಜನಿಕರು ಆಗಾಗ್ಗೆ ನಡೆಸುವ ಕಿರುಕುಳ ಹಾಗೂ ಹಲ್ಲೆ ಘಟನೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ತಾಲೂಕು ಮುಖ್ಯ ವೈದ್ಯಾಧಿಕಾರಿ ಕರವೀರಪ್ರಭು ಕ್ಯಾಲಕೊಂಡ ನೇತೃತ್ವದಲ್ಲಿ ಸಿಬ್ಬಂದಿ ಶಿರಸ್ತೇದಾರ ರಾಮಣ್ಣನವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕರವೀರಪ್ರಭು ಕ್ಯಾಲಕೊಂಡ ಇಲಾಖೆಯು ಅಗತ್ಯ ಸೇವಾ ಅಡಿಯಲ್ಲಿ ಬರುವುದರಿಂದ ತಾವುಗಳು ನಿತ್ಯವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುಸುತ್ತಿದ್ದರೂ, ಆಗಾಗ್ಗೆ ಸಾರ್ವಜನಿಕರಿಂದ ತುಂಬಾ ಕಿರುಕಳ ಅನುಭವಿಸುತ್ತಿದ್ದೇವೆ. ಇತ್ತೀಚಿಗೆ ಕೆಲ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ.
ಇದರಿಂದ ಹಲವು ವೈದ್ಯರು ರಾಜಿನಾಮೆ ನೀಡಿದ್ದಾರೆ. ಇಲ್ಲಿ ಕಾರ್ಯ ನಿರ್ವಹಿಸಿದ ಎಷ್ಟೋ ವೈದ್ಯಾಧಿಕಾರಿಗಳು ಕಿರುಕುಳ ತಾಳಲಾರದೆ ಬೇರೆಡೆಗೆ ವರ್ಗಾವಣೆ ಮಾಡಿಕೊಂಡು ಹೋಗಿರುತ್ತಾರೆ. ಇಂತಹ ಘಟನೆಗಳಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಉಂಟಾಗಿದೆ. ಆಸ್ಪತ್ರೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ತಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ವೈದ್ಯರು ಮನವಿ ಮಾಡಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement