ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬೆಳಗಾವಿಯಲ್ಲಿ ನಾಳೆ ಮುತ್ತಿಗೆ

Vishwanath S
Updated On : 3 Dec 2013, 11:30 am

ರಾಯಚೂರು:  ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ವತಿಯಿಂದ ಡಿ.4ರಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್‌ಪಾಶಾ ದಿದ್ದಿಗಿ ತಿಳಿಸಿದರು.
ನಗರದ ಪ್ರತಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಬ್ಬು ಬೆಳೆಗೆ ಬೆಲೆ ನಿಗದಿಪಡಿಸುವಂತೆ ಈಗಾಗಲೇ ರೈತ ಸಂಘದಿಂದ ಹೋರಾಟ ನಡೆಸಲಾಗುತ್ತಿದೆ. ಇನ್ನುಳಿದ ಬತ್ತ, ಜೋಳ, ಮೆಕ್ಕೆಜೋಳ, ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಸರ್ಕಾರ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಲ್ಲಿ ನಿರ್ಲಕ್ಷ್ಯ ತೋರಿದೆ. ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ ಎಂದರು.
ಸರ್ಕಾರ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು ಹಾಗೂ ಎಂಬಿಬಿಎಸ್ ವೈದ್ಯಾಧಿಕಾರಿಗಳನ್ನು ನೇಮಕ ಮಾಡಬೇಕು. ಅಲ್ಲಿಯವರೆಗೆ ಪ್ರಾಥಮಿಕ ಚಿಕಿತ್ಸೆ ನೀಡುವವರಿಗೆ ಅವಕಾಶ ನೀಡಬೇಕು ಮತ್ತು ಇವರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡುವ ಮೂಲಕ ಉನ್ನತ ವೈದ್ಯಕೀಯ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕೆಂದು ಒತ್ತಾಯಿಸಿದರು. ಸೂಗೂರಯ್ಯಸ್ವಾಮಿ, ವೆಂಕಟರೆಡ್ಡಿ, ಶೇಖ್‌ಹುಸೇನ್, ಚನ್ನಬಸವ, ಹುಚ್ಚಯ್ಯಸ್ವಾಮಿ ಬಾಗಲವಾಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement