ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಯ್ಯಾಪುರ ಟೀಕಿಸುವ ನೈತಿಕತೆ ನಾಯ್ಕ್‌ಗೆ ಇಲ್ಲ

Lingaraj Badiger
Updated On : 4 Dec 2013, 11:06 am

ಲಿಂಗಸ್ಗೂರು: ರಾಜಕೀಯ ಗಂಧ- ಗಾಳಿ ಗೊತ್ತಿಲ್ಲದ ಬಿಜೆಪಿ ಮುಖಂಡ ಟಿ.ಆರ್. ನಾಯ್ಕ ಅವರು ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಅವರ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್ ಕರಡಕಲ್ ತಿಳಿಸಿದರು.
ಸ್ಥಳೀಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿ.ಆರ್. ನಾಯ್ಕ ಮೊದಲು ಬಿಜೆಪಿ ಟಿಕೆಟ್ ಪಡೆಯುವಲ್ಲಿ ವಂಚಿತರಾಗಿ ನಂತರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ನಂತರ ಕಾಂಗ್ರೆಸ್‌ನಲ್ಲೂ ಟಿಕೆಟ್ ದೊರೆಯದ ಕಾರಣ ಪುನಃ ಬಿಜೆಪಿಗೆ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಇದರಿಂದ ಮಾನಸಿಕವಾಗಿ ಕುಸಿತಗೊಂಡು ಮಾಜಿ ಸಚಿವ ಅಮರೇಗೌಡ ಬಯ್ಯಾಪುರರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.
ರಾಡಕೀಯ ಗಂಧ- ಗಾಳಿ ಗೊತ್ತಿಲ್ಲ: ಅಮರೇಗೌಡ ಬಯ್ಯಾಪುರ ಅವರು ಸತತ ನಾಲ್ಕು ಬಾರಿ ಶಾಸಕರಾಗಿ, ಸಚಿವರಾಗಿ ಅಭಿವೃದ್ಧಿಪರ ಚಿಂತನೆ ಹೊಂದಿದ್ದಾರೆ. ಅವರ ವ್ಯಕ್ತಿತ್ವದ ಬಗ್ಗೆ ಲಿಂಗಸ್ಗೂರು ಮತ್ತು ಕುಷ್ಟಗಿ ಕ್ಷೇತ್ರಗಳ ಜನತೆಗೆ ವಿಚಾರಿಸಿದರೆ ತಿಳಿಯುತ್ತದೆ. ರಾಜಕೀಯ ಗಂಧ- ಗಾಳಿ ಗೊತ್ತಿಲ್ಲದ ಟಿ.ಆರ್. ನಾಯ್ಕ್ ಅವರನ್ನು ರಾಜಕೀಯಕ್ಕೆ ತಂದು ಬೆಳೆಯುವಂತೆ ಮಾಡಿದ್ದು ಬಯ್ಯಾಪುರ. ಈಗ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವೆಂದು ವಾಗ್ದಾಳಿ ನಡೆಸಿದರು.
ವಿಪ್ ಉಲ್ಲಂಘಿಸಿದವರ ವಿರುದ್ಧ ದೂರು: ಇತ್ತೀಚೆಗೆ ತಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಅಂಗೀಕಾರಗೊಂಡು ಪುನಃ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸಿದ್ಧಾಂತ ಗಾಳಿಗೆ ತೂರಿ ಕೆಲ ಕಾಂಗ್ರೆಸ್‌ನ ತಾಪಂ ಸದಸ್ಯರು ಜೆಡಿಎಸ್‌ಗೆ ಬೆಂಬಲಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರೀಯಿಸಿದ ಭೂಪನಗೌಡ ಪಾಟೀಲ್, ವಿಪ್ ಉಲ್ಲಂಘನೆ ಮಾಡಿದ ಸದಸ್ಯರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ಜಿಪಂ ಸದಸ್ಯ ಎಚ್.ಬಿ. ಮುರಾರಿ, ಮುಖಂಡರಾದ ಗುಂಡಪ್ಪ ನಾಯಕ, ಮಹ್ಮದ್‌ರಫಿ, ಚನ್ನಾರಡ್ಡಿ ಬಿರಾದಾರ, ಗ್ರಾಪಂ ಅಧ್ಯಕ್ಷ ಅಯ್ಯಣ್ಣ ವಕೀಲರು, ಆದನಗೌಡ ಬುಂಕಲದೊಡ್ಡಿ ಸೇರಿದಂತೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement