ನೌಕರರ ಧರಣಿ ಮುಂದೂಡಿಕೆ
ರಾಯಚೂರು: ರಾಯಚೂರು ಕೃಷಿ ವಿವಿ ಹಂಗಾಮಿ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನು ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ನಡೆಸಿದ ಮಾತುಕತೆಯ ಹಿನ್ನೆಲೆಯಲ್ಲಿ ಮುಂದೂಡಿರುವುದಾಗಿ ತಿಳಿಸಿದ್ದಾರೆ.
ಬಿಸಿಯೂಟ: ವೇತನ ನಿಗದಿಗೆ ಆಗ್ರಹ
ಸಿಂಧನೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅಕ್ಷರ ದಾಸೋಹದ ಬಿಸಿಯೂಟ ಯೋಜನೆ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿಗೊಳಿಸಬೇಕೆಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಶೇಕ್ಷಾಖಾದ್ರಿ ಒತ್ತಾಯಿಸಿದ್ದಾರೆ. ದೇಶದಾದ್ಯಂತ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಮಕ್ಕಳ ಹಾಜರಾತಿ ಹೆಚ್ಚಿಸಲು ಸರ್ಕಾರಗಳು ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಿವೆ. ಆದರೆ ಅಡುಗೆ ಮಾಡುವ ಮಹಿಳಾ ಕಾರ್ಮಿಕರನ್ನು ನಿರ್ಲಕ್ಷಿಸುತ್ತಿವೆ. ಕೇವಲ 1,100 ಮಾಸಿಕ ಗೌರವಧನ ನೀಡುವ ಮೂಲಕ ಸರ್ಕಾರಗಳೇ ಶೋಷಣೆ ಮಾಡುತ್ತಿವೆ. ಇದನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಅನೇಕ ಹೋರಾಟಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕನಿಷ್ಠ ಮಾಸಿಕ ವೇತನ 10 ಸಾವಿರ ನೀಡಬೇಕೆಂದು ಒತ್ತಾಯಿಸಿದ್ದಾರೆ.