ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ರಸ್ತೆ ಸಂಚಾರ ಅವಕಾಶಕ್ಕೆ ಒತ್ತಾಯ

Lingaraj Badiger
Updated On : 6 Dec 2013, 12:01 pm

ರಾಯಚೂರು: ಸಿಂಧನೂರು ತಾಲೂಕಿನ ಕೆಂಗಲ್ ಗ್ರಾಮದ ಮೂಲಕ ಹಾದುಹೋಗುವ ರಸ್ತೆಯನ್ನು ಖಾಸಗಿ ವ್ಯಕ್ತಿಯೊಬ್ಬರು ಅತಿಕ್ರಮಿಸಿದ್ದು, ಅದರಿಂದ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದು ಕೂಡಲೇ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಸಿಐಟಿಯು ಒತ್ತಾಯಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿರುವ ಸಂಘಟನೆಯ ಸಿಂಧನೂರು ತಾಲೂಕು ಕಾರ್ಯದರ್ಶಿ ಯಂಕಪ್ಪ ಕೆಂಗಲ್ ಮತ್ತು ಅಧ್ಯಕ್ಷೆ ರೇಣುಕಮ್ಮ ಮತ್ತಿತರರು, ಕೆಂಗಲ್ ಗ್ರಾಮದ ಮೂಲಕ ಹಾದು ಹೋಗುವ ರಸ್ತೆಯನ್ನು ಕಳೆದ 1972 ರಿಂದಲೂ ಸಾರ್ವಜನಿಕರು ವಿವಿಧ ಕೆಲಸ ಕಾರ್ಯಗಳಿಗೆ ಬಳಕೆ ಮಾಡುತ್ತಿದ್ದಾರೆ.
ಸಾರಿಗೆ ಸಂಸ್ಥೆಯ ಬಸ್ ಸಹ ಈಚಿನ ದಿನಗಳಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದು, ನದಿ ದಂಡೆಯ ಹತ್ತಾರು ಗ್ರಾಮಗಳಿಗೆ ಈ ಮಾರ್ಗದಲ್ಲಿಯೇ ಸಂಪರ್ಕ ಸಾಧ್ಯವಾಗಿತ್ತು. ಧಡೇಸೂಗೂರುನಿಂದ ಸಾಲಗುಂದಾವರೆಗೆ ನಡೆಯುವ ಎಲ್ಲ ಕೃಷಿ ಕಾರ್ಯಕ್ಕೆ ಈ ರಸ್ತೆ ಬಳಕೆಯಾಗುತ್ತಿತ್ತು. ಆದರೆ ಈಚೆಗೆ ವ್ಯಕ್ತಿಯೊಬ್ಬರು ಈ ರಸ್ತೆಯು ಖಾಸಗಿ ಆಸ್ತಿಯಾಗಿದ್ದು, ಅದನ್ನು ಸಾರ್ವಜನಿಕರು ಬಳಕೆ ಮಾಡುವಂತಿಲ್ಲ ಎಂದು ವಿರೋಧಿಸುತ್ತಿದ್ದಾರೆಂದು ಟೀಕಿಸಿದರು.
ಈ ನಿಟ್ಟಿನಲ್ಲಿ ರಸ್ತೆಯನ್ನು ಪುನಾ ಸಾರ್ವಜನಿಕರ ಬಳಕೆಗೆ ದೊರಕಿಸಿಕೊಡುವಂತೆ ಅನೇಕ ಸಂಘಟನೆಗಳು ಹಾಗೂ ಗ್ರಾಮಸ್ಥರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಸಂಚಾರಕ್ಕೆ ತೊಂದರೆಯಾಗಿದೆ. ಕಾರಣ ಕೂಡಲೇ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಿ ಸಾರ್ವಜನಿಕರ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement