ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದು ಕಾನೂನು ಅರಿವು ನೆರವು

Lingaraj Badiger
Updated On : 7 Dec 2013, 11:11 am

ರಾಯಚೂರು: ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಡಿ.7ರಂದು ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 2ಕ್ಕೆ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ನ್ಯಾಯವಾದಿಗಳ ಸಂಘದಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಂ. ಪಾಟೀಲ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್. ಭಾನುರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಯುನಿಸೆಫ್ ಜಿಲ್ಲಾ ಸಂಯೋಜಕ ರಾಘವೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆಂದು ಕಾರ್ಮಿಕ ಅಧಿಕಾರಿ ಆರತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹ್ಮದ್ ಮುಜಾಹಿದ್ ಉಲ್ಲಾ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದೆ.
ಇಂದಿನಿಂದ ವಸ್ತು ಪ್ರದರ್ಶನ
ರಾಯಚೂರು: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲೂಕಿನ ದೇವಸ್ಗೂರಿನ ಸೂಗೂರೇಶ್ವರ ಜಾತ್ರೆಯಲ್ಲಿ ಡಿ.7ರಿಂದ ಜಿಲ್ಲಾಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಜಾತ್ರೆಯ ಅಂಗವಾಗಿ ಡಿ.7ರಿಂದ 9ರವರೆಗೆ ಮೇಳ ಹಮ್ಮಿಕೊಂಡಿದ್ದು, ಮೇಳದಲ್ಲಿ ಸಾರ್ವಜನಿಕರು ಮಹಿಳಾ ಉದ್ದಿಮೆದಾರರು ಉತ್ಪಾದಿಸುವ ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement