ಮಂಡೇಲಾ ನಿಧನ; ಗಣ್ಯರ ಸಂತಾಪ
ಲಿಂಗಸ್ಗೂರು: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರು ನಿಧನರಾದ ಪ್ರಯುಕ್ತ ಗಣ್ಯರು ಸಂತಾಪ ಸೂಚಿಸಿದರು.
ಪಟ್ಟಣದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಶುಕ್ರವಾರ ತಾಲೂಕಾಡಳಿತದಿಂದ ಆಯೋಜಿಸಿದ್ದ ಡಾ. ಅಂಬೇಡ್ಕರರ 57ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಟಿ.ಯೋಗೇಶ್, ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ತಾಪಂ ಅಧ್ಯಕ್ಷೆ ಬಸಮ್ಮ ಯಾದವ್, ಜಿಪಂ ಸದಸ್ಯರಾದ ಭೂಪನಗೌಡ ಕರಡಕಲ್, ಎಚ್.ಬಿ. ಮುರಾರಿ, ಜಿಪಂ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಲ್.ಬಿ. ಸಜ್ಜನ್, ಸಿಡಿಪಿಒ ಪ್ರಭಾಕರ ಸೇರಿ ಗಣ್ಯಮಾನ್ಯರು ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರುದ್ಧ ಹೋರಾಟ ನಡೆಸಿದ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರು ನಿಧನರಾದ ಪ್ರಯುಕ್ತ ಸಂತಾಪ ಸೂಚಿಸಿದರು.