ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನ್ಯಾ. ಸದಾಶಿವ ಆಯೋಗ ವರದಿ ತಿರಸ್ಕಾರಕ್ಕೆ ಆಗ್ರಹ

Rashmi Kasaragodu
Updated On : 9 Dec 2013, 11:12 am

ಲಿಂಗಸ್ಗೂರು: ನ್ಯಾ. ಸದಾಶಿವ ಆಯೋಗ ವರದಿ ಅವೈಜ್ಞಾನಿಕವಾಗಿದ್ದು, ವರದಿ ಜಾರಿಯಿಂದ ಪರಿಶಿಷ್ಟ ಜಾತಿ ವ್ಯಾಪ್ತಿಯ 101 ಜಾತಿಗಳ ಪೈಕಿ 99 ಜಾತಿಗಳಿಗೆ ಅನ್ಯಾಯವಾಗಲಿದೆ. ಸರ್ಕಾರ ಕೂಡಲೇ ವರದಿ ತಿರಸ್ಕರಿಸಬೇಕೆಂದು ನ್ಯಾ. ಸದಾಶಿವ ಆಯೋಗ ವರದಿ ವಿರೋಧಿ ಒಕ್ಕೂಟ ಆಗ್ರಹಿಸಿದೆ.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ ಚಿಗರಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿಯ ಜನರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ಸಮಾನತೆ ಸೌಲಭ್ಯ ಸಿಗುವ ಉದ್ದೇಶದಿಂದ ಮೀಸಲಾತಿ ಸೌಲಭ್ಯ ಕಲ್ಪಿಸಿದೆ.
ಆದರೆ ರಾಜ್ಯ ಸರ್ಕಾರ ಕೆಲ ರಾಜಕೀಯ ಮುಖಂಡರ ಒತ್ತಡಕ್ಕೆ ಮಣಿದು ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ 2005ರಲ್ಲಿ ನಿವೃತ್ತ ನ್ಯಾ. ಸದಾಶಿವ ಅವರ ನೇತೃತ್ವದಲ್ಲಿ ಆಯೋಗ ರಚಿಸಿ ವರದಿ ಸಿದ್ಧಪಡಿಸಿ 2012 ಜೂ.14 ರಂದು ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಆಯೋಗ ವರದಿ ಅಂಶಗಳಿಂದ ಪರಿಶಿಷ್ಟ ಜಾತಿಯ ಒಟ್ಟು 101 ಜಾತಿಗಳಲ್ಲಿ 99 ಜಾತಿಗಳಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿದರು. ಒಕ್ಕೂಟದ ಮುಖಂಡರಾದ ರಾಜೇಶ ಮಾಣಿಕ್, ರಮೇಶ ಕಟ್ಟಿಮನಿ, ಪಂಪಣ್ಣ ಭಜಂತ್ರಿ ಸೇರಿದಂತೆ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement