ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ
ಕ.ಪ್ರ.ವಾರ್ತೆ ರಾಯಚೂರ್ಣು ಡಿ.8
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ದೇಶದ ಆಸ್ತಿಯಾಗಿಸುವತ್ತ ಪಾಲಕರು ಗಮನಹರಿಸಬೇಕು ಎಂದು ನಿವೃತ್ತ ನ್ಯಾ.ಡಾ. ಶಿವರಾಜ್ ಪಾಟೀಲ್ ಹೇಳಿದರು.
ಅವರು ನಗರದ ರಂಗಮಂದಿರದಲ್ಲಿ ಭಾನುವಾರ ಜ.ಶಿವರಾಜ್ ಪಾಟೀಲ್ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಿಂದ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಹಾಗೂ ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳು ವಿಷಯ ಕುರಿತ ಉಪನ್ಯಾಸದಲ್ಲಿ ಮಾತನಾಡಿ, ಪಾಲಕರು ತಮ್ಮ ಮಕ್ಕಳಲ್ಲಿ ಶಿಸ್ತು, ಸಮಯಪ್ರಜ್ಞೆ, ಹೊಣೆಗಾರಿಕೆಯ ಅರಿವು, ಬದ್ಧತೆಯ ಬಗ್ಗೆ ತಿಳಿವಳಿಕೆ ನೀಡುವ ಮೂಲಕ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿಸಲು ಮನವಿ ಮಾಡಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚನ್ನಾರೆಡ್ಡಿ ಪಾಟೀಲ್ ಮಾತನಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷ ಲಿಂಗನಗೌಡ ಮಲ್ಹಾರ, ಗುಂಡಪ್ಪ ಗೌಡ ಹಳ್ಳಿ, ಸಂಗೀತಗಾರ ಡಾ.ನರಸಿಂಹಲು ವಡವಾಟಿ, ಮಾಜಿ ಎಂಎಲ್ಸಿ ಎನ್. ಶಂಕ್ರಪ್ಪ, ಜಿಲ್ಲಾ ನ್ಯಾಯಾಧೀಶರಾದ ಆರ್.ಜೆ. ಸತೀಶ್ ಸಿಂಗ್, ಪ್ರಾಚಾರ್ಯ ಶಿವರಾಜ್ ಬೆಟ್ಟದೂರು, ಮಾರುತಿ ರಾವ್ ಮಾಲೆ, ಡಾ. ಗುಂಡಪ್ಪ ಪಟೇಲ್, ಗುರುರಾಜ ಕುಲಕರ್ಣಿ ಸೇರಿದಂತೆ ಹಲವರು ಇದ್ದರು. ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.