ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಿ

Lingaraj Badiger
Updated On : 10 Dec 2013, 10:39 am

ಕ.ಪ್ರ. ವಾರ್ತೆ, ರಾಯಚೂರು, ಡಿ.9
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಶಿಕ್ಷಕರು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಹೆಚ್ಚಿನ ಶ್ರಮ ವಹಿಸಿ ಫಲಿತಾಂಶದ ಪ್ರಮಾಣ ಸುಧಾರಣೆಗೆ ಪೂರಕ ಕ್ರಮ ಕೈಗೊಳ್ಳುವಂತೆ ಡಿಡಿಪಿಐ ರಾಮಾಂಜನೇಯ ಕರೆ ನೀಡಿದರು.
ನಗರದಲ್ಲಿ ಸೋಮವಾರ ರಂಗಮಂದಿರದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತ ಶಿಕ್ಷಕರ ಕಾರ್ಯಕ್ರಮದಲ್ಲಿ ಮಾತನಾಡಿ, ಶಾಲೆಗಳಲ್ಲಿ ಲಭ್ಯವಿರುವ ಸೌಲಭ್ಯ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸುವಂತೆ ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯಗುರುಗಳಿಗೆ ಸಲಹೆ ನೀಡಿದರು.
ಮಕ್ಕಳ ಬೌದ್ಧಿಕ ಮಟ್ಟದ ಪ್ರಗತಿಗೆ ಪೂರಕವಾಗಿ ಶಿಕ್ಷಕರು ಬೋಧನಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೂ ಮುನ್ನವೇ ಪಠ್ಯಕ್ರಮ ಪೂರ್ಣಗೊಳಿಸಿ ಮಕ್ಕಳನ್ನು ಪರೀಕ್ಷೆಗೆ ಅಣಿಗೊಳಿಸುವ ನಿಟ್ಟಿನಲ್ಲಿ ಅವರಲ್ಲಿ ಕಲಿಕಾಸಕ್ತಿ ಹೆಚ್ಚಿಸುವಂತೆ ಹೇಳಿದರು.
ಕೈಜೋಡಿಸಿ: ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದಲ್ಲಿ ಅಂಥ ಶಾಲೆಗಳ ಮುಖ್ಯಗುರುಗಳೂ ಮಕ್ಕಳಿಗೆ ಪಾಠ ಬೋಧಿಸುವ ಮೂಲಕ ಫಲಿತಾಂಶ ಸುಧಾರಣೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಕೆಲ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನುಳಿದ ಶಾಲೆಗಳಲ್ಲಿನ ಬೋಧಕ ವರ್ಗವು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಫಲಿತಾಂಶ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಬಿಇಒ ಮಲ್ಲಿಕಾರ್ಜುನ, ಶಿಕ್ಷಣಾಧಿಕಾರಿ ಚಂದ್ರಶೇಖರ್ ಭಂಡಾರಿ ಸೇರಿದಂತೆ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಮುಖ್ಯಗುರುಗಳು ಹಾಗೂ ಬೋಧಕ ವರ್ಗದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement