ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಪ್ರತಿ ಮಗುವಿಗೆ ಶಿಕ್ಷಣ ಕೊಡಿಸಿ: ಶಾಸಕ ಪ್ರತಾಪಗೌಡ

Mainashree
Updated On : 11 Dec 2013, 10:48 am

ಮಸ್ಕಿ: ಪ್ರತಿ ಮಗು ಶಿಕ್ಷಣದಿಂದ ವಂಚಿತವಾಗಬಾರದೆಂಬ ಉದ್ದೇಶದಿಂದ ಸರ್ಕಾರ ಕಡ್ಡಾಯ ಶಿಕ್ಷಣ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಲಕಿಯರಿಗಾಗಿ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಕೊಡುವುದರೊಂದಿಗೆ ಪಾಲಕರಿಗೆ ಹಾಗೂ ಶಾಲೆಗೆ ಕೀರ್ತಿ ತರುವಂತಹ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೀರೇಶ ಹೂವಿನಭಾವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಬಿ.ಎಚ್.ದಿವಟರ್, ಶಿವಕುಮಾರ ವಟಗಲ್ ಪಾಲ್ಗೊಂಡಿದ್ದರು. ಮುಖ್ಯೋಪಾಧ್ಯಾಯ ಮಾನಪ್ಪ ಬಡಿಗೇರ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಕರಾದ ಸಿ.ಎ. ಮೇಟಿ, ಪಂಪಾಪತಿ, ಲತಾ ಕುಲಕರ್ಣಿ, ಶಿಕ್ಷಕಿ ರಾಜೇಶ್ವರಿ ಹಿರೇಮಠ, ಹರೀಶ್, ಮಹ್ಮದ್ ಗವಾನ್ ಶಾಲೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement