ಆಕಸ್ಮಿಕ ಬೆಂಕಿ; ಮಹಿಳೆ ಸಾವು
ರಾಯಚೂರು: ತಾಲೂಕಿನ ದೇವಸೂಗೂರು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಮೃತಪಟ್ಟಿದ್ದಾಳೆ. ಮೃತಳನ್ನು ಲಕ್ಷ್ಮೀ(23) ಎಂದು ಗುರುತಿಸಲಾಗಿದೆ. ಈಕೆ ತನ್ನ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಗಳಿಂದ ಬಳಲಿದ್ದಾರೆ. ಕೂಡಲೇ ಈಕೆಯನ್ನು ಬಳ್ಳಾರಿಯ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.