ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಹ ಶಿಕ್ಷಕರ ಸಂಘದ ಸದಸ್ಯತ್ವ ನೋಂದಣಿ

Lingaraj Badiger
Updated On : 12 Dec 2013, 11:00 am

ಲಿಂಗಸ್ಗೂರು: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸದಸ್ಯತ್ವ ಪಡೆಯಲು ಹಾಗೂ ಪದಾಧಿಕಾರಿಗಳ ಆಯ್ಕೆಗೆ ಮತದಾನ ಹಕ್ಕು ಪಡೆಯುವ ಮೂಲಕ ಸಂಘದ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಸಂಘದ ಶ್ರೇಯೋಭಿವೃದ್ಧಿಗೆ ಸಹಕಾರ ನೀಡಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಿವಪುತ್ರಪ್ಪ ಬೆಳ್ಳಿಗನೂರ ಮನವಿ ಮಾಡಿದ್ದಾರೆ.
ಪ್ರೌಢಶಾಲಾ ಸಹಶಿಕ್ಷಕರ ಸಂಘವು ಸಹಶಿಕ್ಷಕರ, ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಸದಸ್ಯರ ಸಹಕಾರದೊಂದಿಗೆ 25 ವರ್ಷಗಳಿಂದ ಹೋರಾಟ, ಶೈಕ್ಷಣಿಕ ಚಟುವಟಿಕೆ ನಡೆಸುತ್ತಾ ಬಂದಿದೆ. ಪ್ರೌಢಶಾಲಾ Ú ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿ ಅವಧಿ 2009 ಸೆ.15 ರಿಂದ ಫೆ.2004ಕ್ಕೆ ಕಾರ್ಯವ್ಯಾಪ್ತಿ ಮುಕ್ತಾಯವಾಗಲಿದೆ. ಚುನಾವಣೆ ಮೂಲಕ ಆಯ್ಕೆ ಮಾಡಲು ತೀರ್ಮಾನಿಸಿದ್ದು, ಬೈಲಾ ನಿಯಮದಂತೆ ಪ್ರೌಢ ಶಾಲಾ ಸಹಶಿಕ್ಷಕರು ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕು. ಪದಾಧಿಕಾರಿಗಳ ಆಯ್ಕೆಗೆ ಮತದಾನದ ಹಕ್ಕು ಪಡೆಯುವ ಮೂಲಕ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಸಂಘದ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement