ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಂಇಎಸ್ ಶಾಸಕರ ವರ್ತನೆಗೆ ಖಂಡನೆ

Rashmi Kasaragodu
Updated On : 14 Dec 2013, 10:44 am

ಸಿಂಧನೂರು: ಎಂಇಎಸ್ ಶಾಸಕರಾದ ಸಂಭಾಜಿ ಪಾಟೀಲ್ ಹಾಗೂ ಅರವಿಂದ ಅವರು ಕರ್ನಾಟಕದ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ತಹಸೀಲ್ದಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ರಮಾದೇವಿ ಶಂಭೋಜಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್. ದೇವೇಂದ್ರಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ್ ಕೌದಿ, ಗೌರವ ಕೋಶಾಧ್ಯಕ್ಷ ಆರ್.ಸಿ. ಪಾಟೀಲ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅಮರೇಶ ಅಲಬನೂರು, ಎಚ್. ಬಸವರಾಜ್, ನಾರಾಯಣಾಚಾರ್ ಜೋಶಿ, ನಾಗರತ್ನ ಬಂಗಾರಶೆಟ್ಟಿ, ಶಿವಲೀಲಾ ಹಿರೇಮಠ, ಸಾಹಿತಿ ಬೀರಪ್ಪ ಶಂಭೋಜಿ, ಕರ್ನಾಟಕ ರಕ್ಷಣಾ ಪಡೆ ತಾಲೂಕಾಧ್ಯಕ್ಷ ಮೌನೇಶ ದೊರೆ ಮತ್ತು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶಕುಮಾರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement