ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಡಿಕ್ಕಿ; ಬೈಕ್ ಸವಾರ ಸಾವು

Mainashree
Updated On : 15 Dec 2013, 10:29 am

ರಾಯಚೂರು: ಲಿಂಗಸ್ಗೂರು ತಾಲೂಕಿನ ಮುದಗಲ್ ಪಟ್ಟಣದ ಮೇಗಳಪೇಟೆಯಲ್ಲಿ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವಿಗೀಡಾಗಿದ್ದಾನೆ. ಮೃತನನ್ನು ಅಯ್ಯಪ್ಪ(35) ಎಂದು ಗುರುತಿಸಲಾಗಿದೆ. ಈತ ಬೈಕ್‌ನಲ್ಲಿ ಲಿಂಗಸ್ಗೂರು ನಗರಕ್ಕೆ ತೆರಳಿದ್ದು, ರಾತ್ರಿ ಮರಳುತ್ತಿದ್ದಾಗ ಮಾರ್ಗ ಮಧ್ಯೆ ಕೆಟ್ಟು ನಿಂತಿದ್ದ ಟ್ರಾಕ್ಟರ್‌ನ ಟ್ರಾಲಿಗೆ ಢಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದು, ಕೂಡಲೇ ಆತನನ್ನು ಬಾಗಲಕೋಟೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಷ ಸೇವನೆ: ಸಾವು
ರಾಯಚೂರು: ತಾಲೂಕಿನ ಫತ್ತೆಪೂರ ಗ್ರಾಮದಲ್ಲಿ ಮದ್ಯ ವ್ಯಸನಿಯೊಬ್ಬ ಆಕಸ್ಮಿಕವಾಗಿ ಕ್ರಿಮಿನಾಶಕ ಸೇವಿಸಿ ಸಾವಿಗೀಡಾಗಿದ್ದಾನೆ. ಮೃತನನ್ನು ಬಸವರಾಜ (45) ಎಂದು ಗುರ್ತಿಸಲಾಗಿದೆ. ಈತ ವಿಪರೀತ ಮದ್ಯ ಸೇವಿಸುತ್ತಿದ್ದು, ಮದ್ಯದ ಅಮಲಿನಲ್ಲಿಯೇ ಮನೆಯಲ್ಲಿರಿಸಿದ್ದ ಕ್ರಿಮಿನಾಶಕವನ್ನು ಮದ್ಯ ಎಂದು ಆಕಸ್ಮಿಕವಾಗಿ ಸೇವಿಸಿ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಿಸದೇ ಆತ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಹಿಳೆ ಆತ್ಮಹತ್ಯೆ
ರಾಯಚೂರು: ಲಿಂಗಸ್ಗೂರು ಪಟ್ಟಣದ ಸಂತೇಬಜಾರ್ ಪ್ರದೇಶದ ನಿವಾಸಿ ಮಹಿಳೆಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ದೇವಮ್ಮ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಳೆದ ಕೆಲ ವರ್ಷಗಳ ಹಿಂದೆ ಮೃತರಾಗಿದ್ದು, ಇವರ ತಂದೆಯೂ ಸಹ ಈಚೆಗೆ ಸಾವನ್ನಪ್ಪಿದ್ದರು. ಅದರಿಂದ ತೀವ್ರ ನೊಂದಿದ್ದ ಆಕೆ ಜೀವನದಲ್ಲಿ ಜಿಗುಪ್ಸೆಗೊಂಡು ನ. 16ರಂದು ತನ್ನ ಮನೆಯಲ್ಲಿ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಳು. ಸುಟ್ಟಗಾಯಗಳಿಂದ ಬಳಲಿದ ಆಕೆಯನ್ನು ಲಿಂಗಸ್ಗೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಿ. 14ರಂದು ಬೆಳಗ್ಗೆ 5 ಗಂಟೆ ಸಾವನ್ನಪ್ಪಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement