ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ರೇಲ್ವೆ ಯೋಜನೆಗಳ ಜಾರಿಗೆ ಖಾಸಗಿ ಸಹಭಾಗಿತ್ವ; ಚಿಂತನೆ

Mainashree
Updated On : 15 Dec 2013, 10:28 am

ರಾಯಚೂರು: ರಾಜ್ಯದಲ್ಲಿ ಬಾಕಿ ಉಳಿದಿರುವ ವಿವಿಧ ರೇಲ್ವೆ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಜಾರಿ ನಿಟ್ಟಿನಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವಕ್ಕೆ ಹೆಚ್ಚು ಒತ್ತು ನೀಡಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅವರು ತಾಲೂಕಿನ ಮಟಮಾರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯ ಸರ್ಕಾರಕ್ಕೆ ಒಂದೇ ಬಾರಿಗೆ ಕೋಟ್ಯಂತರ ರು. ವಿವಿಧ ರೇಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಒದಗಿಸಲು ಕಷ್ಟವಾಗಬಹುದು ಎಂಬ ಉದ್ದೇಶದಿಂದ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ರೇಲ್ವೆ ಮಾರ್ಗ ಅಭಿವೃದ್ಧಿ, ಮೂಲ ಸೌಲಭ್ಯ ಅಭಿವೃದ್ಧಿ, ನೂತನ ಮಾರ್ಗಗಳ ನಿರ್ಮಾಣದಂಥ ಕಾಮಗಾರಿಗಳ ಜಾರಿಗೆ ಚಿಂತನೆ ನಡೆಸಿದ್ದಾಗಿ ತಿಳಿಸಿದರು.
ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಸರ್ಕಾರದೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ ಅವರು, ಮುಂದಿನ ಮಾರ್ಚ್ ವೇಳೆಗೆ ಲೋಕಸಭೆಗೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನವೇ ರಾಜ್ಯದಲ್ಲಿ ಬಾಕಿಯಿರುವ ಅನೇಕ ರೇಲ್ವೆ ಕಾಮಗಾರಿಗಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಚಾಲನೆ ನೀಡುವ ಇರಾದೆ ತಮ್ಮದಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಾಕಿಯಿರುವ ಕಾಮಗಾರಿಗಳ ಪೈಕಿ ಆದ್ಯತೆಯ ಮೇರೆಗೆ ವಿವಿಧ ಯೋಜನೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಜಾರಿಗೆ ತರಲು ಉದ್ದೇಶಿಸಿದ್ದು, ರೇಲ್ವೆ ಇಲಾಖೆಯ ಆದಾಯ ಹೆಚ್ಚಳ ನಿಟ್ಟಿನಲ್ಲಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿದ್ದು, ಅದರ ಪರಿಣಾಮ ರೇಲ್ವೆ ಇಲಾಖೆಯ ಆದಾಯವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಏರಿಕೆ ಕಂಡಿದೆ ಎಂದು ಹೇಳಿದರು.
6ನೇ ವೇತನ ಆಯೋಗದ ಶಿಫಾರಸು ಅಂಗೀಕರಿಸಿದ್ದರಿಂದ ರೇಲ್ವೆ ಇಲಾಖೆಗೆ ಮತ್ತೆ ಸಾವಿರಾರು ಕೋಟಿ ರು. ಹೊರೆ ಬಿದ್ದಿದ್ದು ಅದನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಯಾಣಿಕರಿಗೆ ಸಮರ್ಪಕ ಸೇವೆ ಸಲ್ಲಿಸಲು ಬದ್ಧವಾಗಿರುವುದಾಗಿ  ಖರ್ಗೆ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement