ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮುಖ್ಯ: ಪಾಟೀಲ್

Lingaraj Badiger
Updated On : 16 Dec 2013, 10:46 am

ಸಿಂಧನೂರು: ಹಲವಾರು ಕಾರಣಗಳಿಂದ ಕನ್ನಡ ಭಾಷೆ ಉಳಿವಿಕೆಗೆ ವಿದ್ಯಾರ್ಥಿಗಳು ಬದುಕಿನ ಪ್ರತಿನಿತ್ಯದ ಚಟುವಟಿಕೆಗಳಲ್ಲಿ ಆಂಗ್ಲ ಹಾಗೂ ಇತರೆ ಭಾಷೆಯ ಶಬ್ದಗಳನ್ನು ಬಳಕೆ ಮಾಡದೇ ಕನ್ನಡದ ಶಬ್ದಗಳನ್ನು ಬಳಸಿ ಕನ್ನಡಭಾಷೆಯ ಬೆಳವಣಿಗೆಗೆ ಮುಂದೆ ಬರಬೇಕು. ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಲು ಕಸಾಪ ಗೌರವ ಕೋಶಾಧ್ಯಕ್ಷ ಆರ್.ಸಿ. ಪಾಟೀಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಸುಕಾಲಪೇಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕ ಕಸಾಪನ “ÒÂVÚM¨Ú ಕನ್ನಡ OÛÁÚÀOÚÃÈÚß’¥ÚÆÇ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಿಂದಲೇ ಮಾತೃಭಾಷೆಯ ಬಗ್ಗೆ ಹೆಚ್ಚಿನ ಗೌರವ ಹೊಂದಬೇಕು. ಇದರಿಂದ ಭಾಷೆಯ ಜೊತೆಗೆ ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದರು.
ಕನ್ನಡ ಸಾಹಿತ್ಯಕ್ಕೆ ಕೊಡುಗೆ: ಕನಕದಾಸ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹನುಮಂತ ಬೇರ್ಗಿ, ವಚನ ಸಾಹಿತ್ಯ ಹಾಗೂ ದಾಸ ಸಾಹಿತ್ಯ ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದು, ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆಗೆ ವಿಶಿಷ್ಟ ಸ್ಥಾನವಿದೆ. ನಾವೆಲ್ಲರೂ ಕನ್ನಡ ನಾಡು, ನುಡಿ, ಜಲ ರಕ್ಷಣೆಗೆ ಕಂಕಣಬದ್ದರಾಗಬೇಕು ಎಂದು ಹೇಳಿದರು.
ಸುಕಾಲಪೇಟೆಯ ಸುರೇಶ ಹಚ್ಚೊಳಿ ಮಾತನಾಡಿ, ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಬಂದು ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಲು ಸಲಹೆ ನೀಡಿದರು.
ಸಿರಿಗಂಧ ಬೀರಲಿ: ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ವೀರನಗೌಡ ಪಾಟೀಲ್ ಮಾತನಾಡಿ ಸಿರಿಗಂಧ ಕನ್ನಡ ಕಾರ್ಯಕ್ರಮವು ನಾಡಿನ ತುಂಬ ತನ್ನ ಪರಿಮಳ ಸುವಾಸನೆ ಬೀರಲಿ ಎಂದರು.  ಜಿಲ್ಲಾ ಚುಸಾಪ ಅಧ್ಯಕ್ಷ ಬೀರಪ್ಪ ಶಂಭೋಜಿ, ಕನಕನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಶಮ್‌ಶವಲಿ ಮಾತನಾಡಿದರು. ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಕೌದಿ, ಕಾರ್ಯಕಾರಿ ಸಮಿತಿ ಸದಸ್ಯ ಶಿವಪುತ್ರಪ್ಪ, ಸಹಶಿಕ್ಷಕರಾದ ಬಿರಾದಾರ, ನೀಲಮ್ಮ, ಮಂಜುಳಾ ಉಪಸ್ಥಿತರಿದ್ದರು.
ಸ್ಪರ್ಧಾ ವಿಜೇತರು: ಸಿರಿಗಂಧ ಕನ್ನಡ ಕಾರ್ಯಕ್ರಮದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಪ್ರಮೋದಕುಮಾರ್, ಶಾಮಣ್ಣ  ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನ ಪಡೆದ ಶ್ರೀದೇವಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಲಾಯಿತು. ತಾಲೂಕ ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಕೌದಿ ಪ್ರಾಸ್ತಾವಿಕ ಮಾತನಾಡಿದರು. ನಾಗಮ್ಮ ಪ್ರಾರ್ಥಿಸಿದರು. ಶಿಕ್ಷಕಿ ನೀಲಮ್ಮ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement