ಕಡ್ಡಾಯ ಶಿಕ್ಷಣ: 20ಕ್ಕೆ ಸಮ್ಮೇಳನ
ದೇವದುರ್ಗ: ತಾಲೂಕಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಹಾಗೂ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ.20ರಂದು ಪಟ್ಟಣದಲ್ಲಿ 19ನೇ ತಾಲೂಕು ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿ ಎಂದು ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಶಬ್ಬೀರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದಲ್ಲಿ ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣ ಸಿಗಬೇಕೆಂದು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ತಾಲೂಕಿನಲ್ಲಿ ಸಮರ್ಪಕವಾಗಿ ಜಾರಿಯಾಗಬೇಕು. ಕಾಯಿದೆ ಅಸಮರ್ಪಕ ಜಾರಿಯಿಂದ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಜೀತ ಪದ್ಧತಿಯಂತ ಜ್ವಲಂತ ಸಮಸ್ಯೆಗಳಿವೆ ಎಂದು ದೂರಿದ್ದಾರೆ. ಉನ್ನತ ಶಿಕ್ಷಣ ಪಡೆಯಲು ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತು ನೀಡಬೇಕಿದೆ. ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಕ್ರಮ ಕೈಗೊಳ್ಳಬೇಕಿದ್ದು, ಈ ನಿಟ್ಟಿನಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ನೆರವಾಗಲಿದೆ. ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಮತ್ತು ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. 20ರಂದು ಪಟ್ಟಣದ ಗುರುಭವನದಲ್ಲಿ 19ನೇ ತಾಲೂಕು ಸಮ್ಮೇಳನ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
21ಕ್ಕೆ ಕೆಡಿಪಿ ಸಭೆ
ರಾಯಚೂರು: ಸ್ಥಳೀಯ ಜಿಪಂ ನಲ್ಲಿ ಕಾರಣಾಂತರಗಳಿಂದ ಮುಂದೂಡಲಾಗಿದ್ದ ಕೆಡಿಪಿ ಸಭೆಯನ್ನು ಡಿ.21ರಂದು ಕರೆಯಲಾಗಿದೆ. ನಗರದ ಜಿಪಂ ಸಭಾಂಗಣದಲ್ಲಿ ಬೆಳಗ್ಗೆ 11ಕ್ಕೆ ಜಿಪಂ ಕೆಡಿಪಿ ಸಭೆಯು ಅಧ್ಯಕ್ಷೆ ಲಲಿತಮ್ಮ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಪಂ ತಿಳಿಸಿದೆ.