ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಾಳೆಯಿಂದ ವಿವಿಧ ಸ್ಪರ್ಧೆ

Lingaraj Badiger
Updated On : 18 Dec 2013, 11:11 am

ರಾಯಚೂರು: ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಒಕ್ಕೂಟಗಳ ಆಶ್ರಯದಲ್ಲಿ ಡಿ.19ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತವು, 97ನೇ ಸಂವಿಧಾನ ತಿದ್ದುಪಡಿಯಿಂದ ಸಹಕಾರ ಕ್ಷೇತ್ರಕ್ಕೆ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು, ನಗರದ ದೂರವಾಣಿ ವಿನಿಮಯ ಕೇಂದ್ರದ ಎದುರಿನ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದೆ. ಅದೇ ರೀತಿ ಡಿ.20ರಂದು ಬಡತನ ನಿವಾರಣೆ, ಉದ್ಯೋಗ ಸೃಷ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ ಎಂಬ ವಿಷಯದ ಕುರಿತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಚರ್ಚಾಗೋಷ್ಠಿ ಆಯೋಜಿಸಿದ್ದು, ಈ ಸ್ಪರ್ಧೆಯು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದು, ಚರ್ಚಾ ಸ್ಪರ್ಧೆಯಲ್ಲಿ ಪರ ಮತ್ತು ವಿರೋಧ ಚರ್ಚೆಯ ವಿಜೇತರಿಗೆ ರಾಜ್ಯ ಮಟ್ಟದ ಸ್ಪರ್ಧೆಗೆ ಕಳಿಸಲಾಗುತ್ತದೆ ಎಂದು ಒಕ್ಕೂಟ ತಿಳಿಸಿದೆ.
ಅವಧಿ ವಿಸ್ತರಣೆ
ರಾಯಚೂರು: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗೌರವಧನದ ಮೇಲೆ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಜಿಲ್ಲಾ ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement