ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆ
ಲಿಂಗಸ್ಗೂರು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕುಮಾರ ದೇವರಾಜ ನಾಯಕ ಗುರುಗುಂಟಾ ಗುಲ್ಬರ್ಗ ವಿಶ್ವವಿದ್ಯಾಲಯದ ಪುರುಷರ ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಮಿಳುನಾಡಿನ ಕರೆಕುಡಿ ಅಲಗಪ್ಪ ವಿಶ್ವವಿದ್ಯಾಲಯದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜು ಪ್ರಾಚಾರ್ಯ ಡಾ. ಚನ್ನಬಸವಪ್ಪ ಕುಂಬಾರ, ಉಪನ್ಯಾಸಕ ವೆಂಕೋಬ ಬಿರಾದಾರ, ದೈಹಿಕ ಶಿಕ್ಷಣ ನಿರ್ದೇಶಕ ಶಿವಾನಂದ ನರಹಟ್ಟಿ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ನಂದವಾಡಗಿ ಯೋಜನೆ;
ಪ್ರಾಮಾಣಿಕ ಹೋರಾಟ
ಮಸ್ಕಿ: ಸಾವಿರಾರು ಎಕರೆಗೆ ನೀರುಣಿಸುವ ಮಹತ್ವಾಕಾಂಕ್ಷೆಯ ಯೋಜನೆ ನಂದವಾಡಗಿ ಏತ ನೀರಾವರಿ ಯೋಜನೆಯ ಜಾರಿ ನಿಟ್ಟಿನಲ್ಲಿ ತಾವು ನಡೆಸುತ್ತಿರುವ ಹೋರಾಟ ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಮಸ್ಕಿ ಜಿಪಂ ಸದಸ್ಯ ಎಚ್.ಬಿ. ಮುರಾರಿ ತಿಳಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜಿಪಂ ಕ್ಷೇತ್ರದಲ್ಲಿ ತಮ್ಮ ಗಮನಕ್ಕೆ ಬಂದ ಸಮಸ್ಯೆಗಳ ನಿವಾರಣೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರುವುದಾಗಿ ತಿಳಿಸಿದ ಅವರು, ತಮ್ಮ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ತಾವು ಸವಾಲು ಎದುರಿಸಲು ಸದಾ ಸಿದ್ಧ. ತಳಮಟ್ಟದಿಂದ ಸತತ ಪರಿಶ್ರಮದ ಮೂಲಕ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾಗಿ ತಿಳಿಸಿದರು.