ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸುದ್ದಿ ಸಂಕ್ಷೇಪ

Mainashree
Updated On : 19 Dec 2013, 11:16 am

ದೃಶ್ಯ ಮಾಧ್ಯಮ ಕಾರ್ಯಾಗಾರ; ಅರ್ಜಿ
ರಾಯಚೂರು: ದೃಶ್ಯ ಮಾಧ್ಯಮದಲ್ಲಿ ಅಧ್ಯಯನ ಮಾಡುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಗ್ರಾಫಿಕ್ಸ್ ಕಲೆ, ಶಿಲ್ಪಕಲೆ, ಅನ್ವಯಕಲೆಗಳ ಕುರಿತು ಐದು ದಿನಗಳ ಕಾರ್ಯಾಗಾರವನ್ನು ಮುಂದಿನ ವರ್ಷ ಆಯೋಜಿಸುತ್ತಿದ್ದು, ಅರ್ಹರಿಂದ ಅರ್ಜಿ ಕರೆಯಲಾಗಿದೆ. ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜುದಲ್ಲಿ ಕಾರ್ಯಾಗಾರವು ಮುಂದಿನ ಜನವರಿ ಇಲ್ಲವೇ ಫೆಬ್ರವರಿಯಲ್ಲಿ ವಾರ್ತಾ ಇಲಾಖೆಯಿಂದ ನಡೆಯಲಿದ್ದು, ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾರ್ಯಾಗಾರದ ಅವಧಿಯಲ್ಲಿ ಊಟ ಮತ್ತು ವಸತಿ ಸೌಕರ್ಯ ಇಲಾಖೆಯಿಂದ ಒದಗಿಸಲಾಗುವುದು.  ರಾಜ್ಯದ ಯಾವುದೇ ಕಲಾ ಕಾಲೇಜಿನಲ್ಲಿ ಅಧ್ಯಯನ ಮಾಡುವ ಪರಿಶಿಷ್ಟ ಜಾತಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ತಮ್ಮ ಹೆಸರು, ವಯಸ್ಸು, ವಿಳಾಸ, ವಿದ್ಯಾರ್ಹತೆ, ಜಾತಿ ಇತ್ಯಾದಿ ಸ್ವ-ವಿವರವುಳ್ಳ ಮಾಹಿತಿಯನ್ನು ಬಿಳಿ ಹಾಳೆಯ ಮೇಲೆ ಬೆರಳಚ್ಚು ಮಾಡಿಸಿ ಅಥವಾ ಕೈಯಿಂದ ಸ್ಪಷ್ಟವಾಗಿ ಭರ್ತಿ ಮಾಡಿ, ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಮುಖ್ಯಸ್ಥರ ಅನುಮತಿ ಪತ್ರದೊಂದಿಗೆ, ಭರ್ತಿ ಮಾಡಿದ ಅರ್ಜಿಯನ್ನು ದೃಢೀಕೃತ ದಾಖಲೆಗಳೊಂದಿಗೆ ನಿರ್ದೇಶಕರು, ವಾರ್ತಾ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-1 ಇಲ್ಲಿಗೆ ಖುದ್ದಾಗಿ/ಅಂಚೆ/ಕೋರಿಯರ್ ಮೂಲಕ ಡಿ.31ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಓಲಾ ನಿಧನಕ್ಕೆ ಶೋಕ
ಗುಲ್ಬರ್ಗ: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಸೀಸರಾಮ ಓಲಾ ಅವರ ನಿಧನಕ್ಕೆ ಎನ್‌ಸಿವಿಟಿ ಸದಸ್ಯ ಜಗದೇವ ಗುತ್ತೇದಾರ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಒಬ್ಬ ಹಿರಿಯ ಅನುಭವಿ ಹಾಗೂ ಧೀಮಂತ ನಾಯಕರನ್ನು ಕಳೆದುಕೊಂಡಿದೆ. ಅವರು 86ನೇ ಇಳಿವಯಸ್ಸಿನಲ್ಲೂ ಕೇಂದ್ರದಲ್ಲಿ ಒಂದು ಉನ್ನತ ಹುದ್ದೆಯನ್ನು ಅಲಂಕರಿಸಿ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದ್ದಾರೆ. ಅವರ ನಿಧನದಿಂದ ರಾಷ್ಟ್ರ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಅವರ ಕುಟುಂಬದವರಿಗೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಜಗದೇವ ಗುತ್ತೇದಾರ, ಭೀಮರಾವ ಸರ್ವಮಂಗಳ ಹಿರೇಮಠ ಪ್ರಾರ್ಥಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement