ಪ್ರತಿಭಾ ಕಾರಂಜಿ ಕಾರ್ಯಕ್ರಮ
ಮುದಗಲ್: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸುವ ಸಲುವಾಗಿ ಸರ್ಕಾರ ಪ್ರತಿ ಸಿಆರ್ಸಿ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಒಳ್ಳೆಯದು ಎಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಸ್.ಆರ್. ರಸೂಲ್ ಹೇಳಿದರು. ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿಆರ್ಸಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಿಆರ್ಸಿ ಅಧಿಕಾರಿ ಮಹಾಮುನಿಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಪಂ ಅಧ್ಯಕ್ಷ ರಜ್ಜಬಲಿ ಟಿಂಗ್ರಿ ಕಾರ್ಯಕ್ರಮ ಉದ್ಘಾಟಿಸಿದರು, ಮುಖ್ಯ ಅತಿಥಿಗಳಾಗಿ ಪ.ಪಂ. ಉಪಾಧ್ಯಕ್ಷೆ ಹಂಪಮ್ಮ ನಾಗನಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಹೇಮಂತ ನಾಗಲಾಪುರ, ಪ್ರಾ.ಶಾ. ಶಿಕ್ಷಕರ ಸಂಘದ ಅಧ್ಯಕ್ಷ ಶಿವಯೋಗಪ್ಪ, ಎಪಿಎಂಸಿ ಅಧ್ಯಕ್ಷ ಚನ್ನವೀರಪ್ಪಗೌಡ ಪಾಗದ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಡಾ. ಅಯ್ಯಪ್ಪ ಅನ್ನಿಗೋಳ, ಪ.ಪಂ. ಸದಸ್ಯ ಬಂದೇನವಾಜ, ಎಸ್ಡಿಎಂಸಿ ಅಧ್ಯಕ್ಷ ಸಯ್ಯದ್ ಸಾಬ್, ಸೈಯ್ಯದ್ ಯಾಸೀನ್ ಇದ್ದರು.