ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವೃತ್ತಿ ಶಿಕ್ಷಣ ಕಾಯ್ದೆ ಜಾರಿಗೆ ವಿರೋಧ

Mainashree
Updated On : 20 Dec 2013, 11:13 am

ಕ.ಪ್ರ. ವಾರ್ತೆ  ರಾಯಚೂರು  ಡಿ.19
2006ರ ವೃತ್ತಿ ಶಿಕ್ಷಣ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನಗರದಲ್ಲಿ ಗುರುವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‌ನ ಕಾರ್ಯಕರ್ತರು ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿ ಸರ್ಕಾರದ ನೀತಿಯನ್ನು ವಿರೋಧಿಸಿದ ಕಾರ್ಯಕರ್ತರು, 2006ರ ಸಿಇಟಿ ನೂತನ ಕಾಯಿದೆ ಜಾರಿಯಿಂದ ರಾಜ್ಯದಲ್ಲಿನ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಕಾರಣ ಕೂಡಲೇ ನೂತನ ಕಾಯಿದೆ ಜಾರಿಗೊಳಿಸದಂತೆ ಒತ್ತಾಯಿಸಿದರು.
ಕಾಯ್ದೆ ಜಾರಿಗೊಳಿಸುವ ಸರ್ಕಾರದ ನಿರ್ಧಾರದಿಂದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣದ ಕಲಿಕೆ ಸಾಧ್ಯವಾಗುವುದಿಲ್ಲ. ವೈದ್ಯಕೀಯ, ಎಂಜಿನಿಯರಿಂಗ್, ಡೆಂಟಲ್ ವೃತ್ತಿಗೆ ತೊಡಗಲು ಸಾಮಾನ್ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆತ್ತು ಖಾಸಗಿ ಸಂಸ್ಥೆಗಳಿಗೆ ಪ್ರವೇಶ ಪಡೆಯುವಂತಾಗುತ್ತದೆ ಎಂದು ಟೀಕಿಸಿದರು.
ಕಾಯಿದೆಯ ಜಾರಿಯಿಂದ ಖಾಸಗಿ ಕಾಲೇಜುಗಳಿಗೆ ಭ್ರಷ್ಟಾಚಾರಕ್ಕೆ ಅನುಕೂಲ ಕಲ್ಪಿಸಿದಂತಾಗಿದೆ. ಕಾರಣ ಕೂಡಲೇ ರಾಜ್ಯ ಸರ್ಕಾರ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯಿದೆಯ ಜಾರಿಯನ್ನು ಕೈಬಿಟ್ಟು ರಾಜ್ಯದಲ್ಲಿ ಜಾರಿಯಲ್ಲಿರುವ ಸಿಇಟಿ ವ್ಯವಸ್ಥೆಯನ್ನು ಬಲಪಡಿಸುವಂತೆ ಒತ್ತಾಯಿಸಿದರು.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಮುಂದುವರಿಸಬೇಕು. ಪ್ರವೇಶ ಶುಲ್ಕ ಸಾಮಾನ್ಯ ವಿದ್ಯಾರ್ಥಿಗಳಿಗೆ ಕೈಗೆಟುಕುವಂತೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಎನ್.ಎಸ್. ವಿರೇಶ, ಜಿ. ಪ್ರಮೋದ್ ಕುಮಾರ್, ಸಲೀಮ್, ಸುರೇಶ್, ಲಕ್ಷ್ಮೀ ನಾರಾಯಣ, ಚೇತನಾ ಬನಾರೆ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement