ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸೆಮಿಸ್ಟರ್ ಪದ್ಧತಿ ಬೇಡ

Mainashree
Updated On : 20 Dec 2013, 11:13 am

ಕ.ಪ್ರ. ವಾರ್ತೆ  ರಾಯಚೂರು  ಡಿ.19
ರಾಜ್ಯದ ಐಟಿಐ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದಿಂದಲೇ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸೆಮಿಸ್ಟರ್ ಪರೀಕ್ಷೆ ಪದ್ಧತಿಯನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ನಗರದಲ್ಲಿ ಎಐಡಿವೈಒ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಸೆಮಿಸ್ಟರ್ ಪದ್ಧತಿಯು ವಿದ್ಯಾರ್ಥಿಗಳಿಗೆ ಮಾರಕವಾಗಿದೆ. ಐಟಿಐ ವಿದ್ಯಾರ್ಥಿಗಳಿಗೆ ಜಾರಿ ಮಾಡಲು ಮುಂದಾಗಿರುವ ಸೆಮಿಸ್ಟರ್ ಪದ್ಧತಿಯು ಅಪ್ರಜಾತಾಂತ್ರಿಕ ವಿಧಾನವಾಗಿದೆ ಎಂದು ಆರೋಪಿಸಿದರು.
ಐಟಿಐ ಕಲಿಕೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಸದ್ಯದ ನೂತನ ಪದ್ಧತಿಯಿಂದಾಗಿ ತರಬೇತಿ ಬದಲಿಗೆ ಪರೀಕ್ಷೆಗೆ ಸಿದ್ಧತೆ ನಡೆಸುವಂಥ ಪರಿಸ್ಥಿತಿಯಿದೆ. ಇದರಿಂದ ಗುಣಮಟ್ಟದ ಕಲಿಕೆಗೆ ತೀವ್ರ ಹಿನ್ನಡೆಯಾಗುತ್ತದೆ ಎಂದು ಆರೋಪಿಸಿದರು.
ಕೂಡಲೇ ಅವೈಜ್ಞಾನಿಕ ಸೆಮಿಸ್ಟರ್ ಪದ್ಧತಿ ಕೈಬಿಡಬೇಕು. ಈಗಾಗಲೇ ಜಾರಿಯಲ್ಲಿರುವ ತರಬೇತಿ ಕೊನೆಯಲ್ಲಿ ಪರೀಕ್ಷೆ ನಡೆಸುವ ಪದ್ಧತಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್ ಸೇರಿ ಐಟಿಐ ಕಾಲೇಜಿನ ನೂರಾರು ವಿದ್ಯಾರ್ಥಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement