'ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಭವಿಷ್ಯ ರೂಪಿಸಿ'
ಮುದಗಲ್: ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಉತ್ತಮ ಭವಿಷ್ಯ ರೂಪಿಸಬೇಕಾದರೆ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಕಾಂಗ್ರೆಸ್ ಯುವ ಮುಖಂಡ ಪ್ರಸನ್ನಕುಮಾರ ಮಸ್ಕಿ ಹೇಳಿದರು.
ಸಮೀಪದ ಕನ್ನಾಳ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹೈದ್ರಾಬಾದ್ ಕರ್ನಾಟಕ ಭಾಗ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವಾಗಿತ್ತು. ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕಲಂ 371(ಜೆ) ಜಾರಿಗೆ ತಂದಿದ್ದು ಈ ಭಾಗದ ಶಿಕ್ಷಣವಂತರಿಗೆ ಒಳ್ಳೆ ಅವಕಾಶ ದೊರೆಯುವಂತೆ ಮಾಡಿದೆ ಎಂದರು.