ಕನ್ನಾರಿ; ಆಕಸ್ಮಿಕ ವಿಷ ಸೇವನೆ, ವ್ಯಕ್ತಿ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಗ್ರಾಮದಲ್ಲಿ ಆಕಸ್ಮಿಕ ವಿಷ ಸೇವನೆಯಿಂದ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಮೃತನನ್ನು ಕರಿಯಪ್ಪ ಎಂದು ಗುರುತಿಸಲಾಗಿದೆ. ಈತ ತನ್ನ ಹೊಲದಲ್ಲಿ ಹತ್ತಿ ಬೆಳೆಗೆ ಕ್ರಿಮಿನಾಶಕ ಸಿಂಪರಣೆ ಮಾಡುತ್ತಿದ್ದ ವೇಳೆ ಆಕಸ್ಮಿಕ ವಿಷ ದೇಹ ಸೇರಿ ಅಸ್ವಸ್ಥಗೊಂಡಿದ್ದು, ಕೂಡಲೇ ಆತನನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಸೇರಿಸಿದರೂ ಪ್ರಯೋಜನವಾಗದೇ ಸಾವಿಗೀಡಾಗಿದ್ದಾನೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಜೂಜು: 7 ಮಂದಿ ಬಂಧನ
ರಾಯಚೂರು; ಲಿಂಗಸ್ಗೂರು ತಾಲೂಕಿನ ಮಸ್ಕಿ ಪಟ್ಟಣದ ಹೊರವಲಯದಲ್ಲಿ ಜೂಜಾಡುತ್ತಿದ್ದ 7ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ಭೀಮಣ್ಣ, ತಿಮ್ಮಣ್ಣ, ಹನುಮಂತ, ತಿಮ್ಮಣ್ಣ ಕಾಸನದೊಡ್ಡಿ, ಈರಣ್ಣ ಚೋರಡ್ಡಿ, ಮಲ್ಲಿಕಾರ್ಜುನ, ಹಮೀದ್ ಮಿಯಾ ಎಂದು ಗುರುತಿಸಲಾಗಿದೆ. ಇವರು ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ರು. 1,02,800 ಜಪ್ತಿ ಮಾಡಲಾಗಿದೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.