'ಏಡ್ಸ್ ಪೀಡಿತರನ್ನು ಪ್ರೀತಿ, ವಿಶ್ವಾಸದಿಂದ ಕಾಣಿ'
ಸಿಂಧನೂರು: ಪ್ರತಿಯೊಬ್ಬರೂ ಏಡ್ಸ್ ಪೀತರನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಭಾರತಿ ಎಸ್. ರಾಯಣ್ಣನವರ್ ಸಲಹೆ ನೀಡಿದರು.
ಅವರು ಸ್ಥಳೀಯ ನ್ಯಾಯಾಲಯದಲ್ಲಿ ಸೋಮವಾರ ಏಡ್ಸ್ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವಕರು ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಇತ್ತೀಚಿನ ದಿನಮಾನಗಳಲ್ಲಿ ಕೆಲ ಯುವಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಕೀಲರ ಸಂಘದ ಅಧ್ಯಕ್ಷ ಕೆ. ಭೀಮನಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶೇಖರಪ್ಪ ಶಾಲಿಗನೂರು, ಕ್ಷೇತ್ರ ಆರೋಗ್ಯಾಧಿಕಾರಿ ಡಾ.ಈಶ್ವರ ದಾಸಪ್ಪನವರ ಇದ್ದರು. ಬಿ.ನಿರುಪಾದೆಪ್ಪ ನಿರೂಪಿಸಿದರು.