ರಾಯಚೂರು

ಬಿಜೆಪಿ ಕಾರ್ಯಕರ್ತರ ಸಮಾವೇಶ

ರಾಯಚೂರು: ನಗರದ ಅಯ್ಯಪ್ಪ ಸ್ವಾಮಿ ದೇವಾಲಯದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿಜೆಪಿಯ ಶಕ್ತಿಕೇಂದ್ರ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು.
ಸಮಾವೇಶದಲ್ಲಿ ಮಾಜಿ ಶಾಸಕ ಪಾಪಾರೆಡ್ಡಿ ಮಾತನಾಡಿ, ಬಿಜೆಪಿ ಸರ್ಕಾರದ ಅಧಿಕಾರವಧಿಯಲ್ಲಿ ನಗರದ ಅಭಿವೃದ್ಧಿಗೆ ಕೋಟ್ಯಂತರ ರು. ಅನುದಾನ ದೊರೆತಿದೆ. ಸಿಎಂ ವಿಶೇಷ ಅಭಿವೃದ್ಧಿ ಅನುದಾನದಡಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆದರೆ ಕಾಂಗ್ರೆಸ್ ಶಾಸಕ  ಸೈಯದ್ ಯಾಸೀನ್ ಎಲ್ಲವನ್ನೂ ತಾವೇ ಮಾಡಿದ್ದಾಗಿ ಹೇಳುತ್ತಿದ್ದಾರೆಂದು ಟೀಕಿಸಿದರು.
ಅನುದಾನ: ಶಾಸಕ ಸೈಯದ್ ಯಾಸೀನ್ ಇದುವರೆಗೆ ಅಕ್ರಮ ಸಕ್ರಮ ಯೋಜನೆಯಡಿ 1200 ಅರ್ಜಿಗಳನ್ನು ವಿಲೇವಾರಿ ಮಾಡಿಲ್ಲ. ಆಶ್ರಯ ವಸತಿ ಯೋಜನೆಗೆ 1ಸಾವಿರ ಮನೆಗಳು ಮಂಜೂರಾಗಿದ್ದು, ಅವುಗಳ ಹಂಚಿಕೆಗೆ ಮುಂದಾಗಿಲ್ಲ.ಆರಾಧನಾ ಯೋಜನೆ ಅಡಿ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ರು. 25ಲಕ್ಷ ದೊರೆತಿದ್ದರೂ, ಅದರ ಬಳಕೆಗೆ ಸಭೆಯನ್ನೇ ಶಾಸಕರು ನಡೆಸಿಲ್ಲ ಎಂದು ದೂರಿದರು.
ಅಭಿವೃದ್ಧಿ: ಎಪಿಎಂಸಿ ಅಧ್ಯಕ್ಷ ಆರ್. ತಿಮ್ಮಯ್ಯ ಮಾತನಾಡಿ, ದೇಶದಲ್ಲಿ ಕಳೆದ ಅನೇಕ ದಶಕಗಳಿಂದ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೆ ಅಭಿವೃದ್ಧಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ಅಧಿಕಾರವಧಿಯಲ್ಲಿ ಕೈಗೊಂಡು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿಕೊಡುವಂತೆ ಸಲಹೆ ನೀಡಿದರು.
ಬಂಡೇಶ್ ವಲ್ಕಂದಿನ್ನಿ, ರಮಾನಂದ ಯಾದವ್, ಮಲ್ಲೇಶಪ್ಪ, ಹರವಿ ನಾಗನಗೌಡ,  ಗಿರೀಶ್ ಕನಕವೀಡು ಮಾತನಾಡಿದರು. ವೇದಿಕೆಯಲ್ಲಿ ಎಪಿಎಂಸಿ ಉಪಾಧ್ಯಕ್ಷ ಬಾಬುರಾವ್, ಬಿ.ಎಸ್.ಸುರಗಿಮಠ, ಶರಣಮ್ಮ ಕಾಮರೆಡ್ಡಿ, ಲಾಲಪ್ಪ, ಕೆ. ನಲ್ಲಾರೆಡ್ಡಿ, ವೆಂಕೋಬ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್