ರಾಯಚೂರು

ಇಂದು ಚಿಣ್ಣರ ಅಂಗಳ


ಸಿಂಧನೂರು: ನಗರದ ಆದರ್ಶ ಕಾಲೋನಿಯಲ್ಲಿರುವ ಸಹನಾ ಎಬಿಸಿ ಮಾಂಟೆಸ್ಸರಿ ಪ್ರಾಥಮಿಕ ಶಾಲೆಯ ವತಿಯಿಂದ ನಾಳೆ ಫೆ.3ರಂದು ಸತ್ಯಾಗಾರ್ಡನ್‌ನಲ್ಲಿ ಸಂಜೆ 5 ಗಂಟೆಗೆ ಚಿಣ್ಣರ ಅಂಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿ ಎಸ್. ಶಿವರಾಜ ತಿಳಿಸಿದ್ದಾರೆ. ಮಕ್ಕಳಿಂದ ಮುದ ನೀಡುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು ಈ ಚಿಣ್ಣರ ಕಾರ್ಯಕ್ರಮಕ್ಕೆ ಚಿಣ್ಣರ ಪಾಲಕರು, ಸಾರ್ವಜನಿಕರು ಸಾಕ್ಷಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.
ಜೆಡಿಎಸ್‌ಗೆ ನೇಮಕ
ದೇವದುರ್ಗ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ತಾಲೂಕಿನ ಮಸರಕಲ್ ಗ್ರಾಮದ ಘಟಕದ ಅಧ್ಯಕ್ಷರಾಗಿ ಬಿ.ಎಂ. ಬಾಬು ನೇಮಕಗೊಂಡಿದ್ದಾರೆ. ಮಾಜಿ ಸಚಿವ ವೈ. ಹನುಮಂತಪ್ಪ ಆಲ್ಕೋಡ್ ಅವರ ಶಿಫಾರಸ್ಸಿನ ಮೇರೆಗೆ ಇವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಸಂಘಟನೆಗಾಗಿ ಉಪಾಧ್ಯಕ್ಷರಾಗಿ ರಿಯಾಜ್ ಗುಂಟ್ರಾಳ,  ಕಾರ್ಯಾಧ್ಯಕ್ಷರಾಗಿ ಬಾವಾಸಾಬ್ ಮಸರಕಲ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ. ಪ್ರತಾಜ್ ಅವರನ್ನು ನೇಮಿಸಲಾಗಿದೆ ಎಂದು ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ನೂರಮಹ್ಮದ್ ಮಸರಕಲ್ ತಿಳಿಸಿದ್ದಾರೆ.
ಎಸ್‌ಡಿಎಂಸಿಗೆ ನೇಮಕ
ದೇವದುರ್ಗ: ತಾಲೂಕಿನ ಅರಷಿಣಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಸಂಜೀವಪ್ಪ ನಾಯಕ ನೇಮಕಗೊಂಡಿದ್ದಾರೆ. ಇತ್ತೀಚೆಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಗಿದ್ದು, ಸದಸ್ಯರಾಗಿ ತಿಪ್ಪಮ್ಮ, ದುರುಗಮ್ಮ, ಉಮಾದೇವಿ, ಶರಣಮ್ಮ, ಯಲ್ಲಮ್ಮ, ಬಸವರಾಜ, ಶರಣಪ್ಪ, ಭೈರಪ್ಪ,  ಅಬ್ದುಲ್ ಸಾಬ್, ಯಂಕಪ್ಪ, ಮಲ್ಲನಗೌಡ ಆಯ್ಕೆಯಾಗಿದ್ದಾರೆ. ಭೀಮರಾಯ ನಾಯಕ ಸೇರಿ ಗ್ರಾಮದ ಮುಖಂಡರು ಇದ್ದರು.
ರೋಗಿಗಳಿಗೆ ಹಾಲು ವಿತರಣೆ
ಸಿಂಧನೂರು: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಎಚ್.ಶಿವರಾಮೇಗೌಡರ ಹುಟ್ಟು ಹಬ್ಬದ ಅಂಗವಾಗಿ ಸ್ಥಳೀಯ ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಕೆಜೆಪಿ ಪಕ್ಷದ ನಿಯೋಜಿತ ಅಭ್ಯರ್ಥಿ ರಾಜಶೇಖರ ಪಾಟೀಲ್, ಸ್ವಾಮಿ ವಿವೇಕಾನಂದ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಶೇಖರಗೌಡ ಬಾದಲರ್, ಕಾರ್ಯದರ್ಶಿ ಕ್ರಾಂತಿಕುಮಾರ, ಕೃಷ್ಣಮೂರ್ತಿ ಶೆಟ್ಟಿ ಅವರು ಭಾಗವಹಿಸಿ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದರು. ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕರವೀರಪ್ರಭು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ