ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಳ್ಳಾರಿ ಬಂದ್‌ಗೆ ಬೆಂಬಲ: ಎಬಿವಿಪಿ ಪ್ರತಿಭಟನೆ

Lingaraj Badiger
Updated On : 6 Feb 2013, 10:45 am

ರಾಯಚೂರು: ಬಳ್ಳಾರಿಯಲ್ಲಿ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ಖಂಡಿಸಿ ಸಂಘಟನೆ ಕರೆ ನೀಡಿರುವ ಬಳ್ಳಾರಿ ಬಂದ್‌ಗೆ ಬೆಂಬಲಿಸಿ ನಗರದಲ್ಲಿ ಮಂಗಳವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಿಂದ ಬಿಆರ್‌ಬಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಳ್ಳಾರಿಯಲ್ಲಿ ಪೊಲೀಸರು ಎಬಿವಿಪಿ ಕಾರ್ಯಕರ್ತರ ಮೇಲೆ ಅನಗತ್ಯವಾಗಿ ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಕರ್ತರು ವಿರುದ್ಧ ಸುಳ್ಳು ಕೇಸ್‌ಗಳನ್ನು ದಾಖಲಿಸಿದ್ದಾರೆಂದು ಆರೋಪಿಸಿದರು.
ಸರ್ಕಾರ ಕೂಡಲೇ ಎಬಿವಿಪಿ ಕಾರ್ಯಕರ್ತರ ವಿರುದ್ಧ ದಾಖಲಿಸಿದ ಕೇಸ್ ವಾಪಸು ಪಡೆಯಬೇಕು. ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ನಗರ ಕಾರ್ಯದರ್ಶಿ ಬಸವೇಶ್ ಕೋರಿ, ಶರಣಬಸವ, ಭೀಮಾಶಂಕರ್, ವಿಜಯ್ ಸಾಡಿಕರ್, ಭಾನುತೇಜ, ರಾಘವೇಂದ್ರ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement