ರಾಯಚೂರು: ನಗರದ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಇತ್ತೀಚೆಗೆ ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ತ್ರಿವಿಕ್ರಮ್ ಜೋಷಿ ಪರಿಶೀಲಿಸಿದರು.
ಒಟ್ಟು 4.50 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಅವರಿಗೆ ಈಶಾನ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ವರ ರೆಡ್ಡಿ ಕಾಮಗಾರಿ ಕುರಿತು ಮಾಹಿತಿ ನೀಡಿ, ಬಾಕಿ ಉಳಿದಿರುವ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತ್ರಿವಿಕ್ರಮ್ ಜೋಷಿ ಅವರು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿ ಅಗತ್ಯ ವಿರುವ ಅನುದಾನ ಒದಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಚಿನ್ನಿ, ನವಾಬ್, ಕಿಶನರಾವ್ ಕುಲಕರ್ಣಿ, ರಾಮರಾವ್ ಕುಲಕರ್ಣಿ, ಖದೀರ್, ರವಿ, ಮೋಹನ್ ದಾಸ್ ಇದ್ದರು.