ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದು ಕಸಾಪದಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ

Lingaraj Badiger
Updated On : 7 Feb 2013, 11:01 am

ಸಿಂಧನೂರು: ತಾಲೂಕಿನ ಗುಡುದೂರು ಗ್ರಾಮದ ಬಸನಗೌಡ ಬಾದರ್ಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಫೆ.7ರಂದು ಬೆಳಿಗ್ಗೆ 9.30ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ದತ್ತಿದಾನಿಗಳು ಹಾಗೂ ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ ವಹಿಸುವರು. ಉದ್ಘಾಟನೆಯನ್ನು ಜಿಪಂ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ ನೆರವೇರಿಸುವರು. ಬಸನಗೌಡ ಬಾದರ್ಲಿ ಸ್ಮಾರಕ ದತ್ತಿಯ ಉಪನ್ಯಾಸವನ್ನು ಸಾಮಾಜಿಕ ಪರಿವರ್ತನೆಯಲ್ಲಿ ತತ್ವಪದಗಳು ಕುರಿತು ಆಧುನಿಕ ವಚನಕಾರ ಹುಲ್ಲೂರಿನ ಅಮರಗುಂಡಪ್ಪ ಹೂಗಾರ ದತ್ತಿ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗುಡದೂರು ಜಿಪಂ ಸದಸ್ಯ ಶಿವನಗೌಡ ಎಲೆಕೂಡ್ಲಿಗಿ, ಜಿಪಂ ಮಾಜಿ ಸದಸ್ಯ ಹನುಮಂತಪ್ಪ ಮುದ್ದಾಪೂರ ರವಿ. ಸಿ.ಬಿ., ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಸಿ. ಶರಣಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ ಮಸ್ಕಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಎಸ್. ಶರಣೇಗೌಡ, ಗೌರವ ಕಾರ್ಯದರ್ಶಿ ಎಸ್. ದೇವೇಂದ್ರಗೌಡ, ಬಸನಗೌಡ ಬಾದರ್ಲಿ, ಪಪೂ ಮಹಾವಿದ್ಯಾಲಯದ ಪ್ರಾಚಾರ್ಯ ಪಂಪಾಪತೆಪ್ಪ ಗುಡದೂರು, ಜಾನಪದ ಕಲಾವಿದ ತತ್ವಪ ದಕಾರ ನಾರಾಯಣಪ್ಪ ಮಾಡಶಿರವಾರ, ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ಉಪಸ್ಥಿತರಿರುವರು.  ಸಾಹಿತ್ಯಾಸಕ್ತರು ಹಾಗೂ ಎಲ್ಲ ವರ್ಗದ ಮಂದಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕ ಕಸಾಪ ಗೌರವ ಕಾರ್ಯದರ್ಶಿಗಳಾದ ಶ್ರೀಶೈಲ ಕೌದಿ ಹಾಗೂ ವೀರೇಶ ಗೋನವಾರ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement