ರಾಯಚೂರು

ಜೂಜು: 6 ಜನರ ಬಂಧನ

ರಾಯಚೂರು: ಲಿಂಗಸ್ಗೂರು ತಾಲೂಕಿನ ಮಸ್ಕಿ ಪಟ್ಟಣದ ಹಳ್ಳದ ದಂಡೆಯಲ್ಲಿ ಜೂಜಾಡುತ್ತಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.
 ಬಂಧಿತರನ್ನು ಅಮೀರ್ ಅಲಿ ಹಾಗೂ ಇತರೆ ಐವರೆಂದು ಗುರುತಿಸಲಾಗಿದೆ. ಇವರು ಹಳ್ಳದ ದಂಡೆಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, 3420 ಜಪ್ತಿ ಮಾಡಿದ್ದಾರೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಟ್ಟೆನೋವು : ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ಹುಡಾ ಗ್ರಾಮದಲ್ಲಿ ಹೊಟ್ಟೆನೋವು ತಾಳದೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಪರಸಪ್ಪ ಎಂದು ಗುರುತಿಸಲಾಗಿದೆ.
 ಈತ ಬಹುಕಾಲದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದರಿಂದ ಬೇಸತ್ತ ಆತ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸರು ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಮೂರ್ಛೆ; ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ಚಿರತನಾಳ ಗ್ರಾಮದಲ್ಲಿ ಮೂರ್ಛೆ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಈತನಿಗೆ ಚಿಕ್ಕಂದಿನಿಂದಲೂ ಮೂರ್ಛೆ ರೋಗವಿದ್ದು ಅದರಿಂದ ಬೇಸತ್ತು ಮನೆಯಲ್ಲಿ ಇಲಿ ಪಾಷಾಣವನ್ನು ಸೇವಿಸಿ  ಅಸ್ವಸ್ಥಗೊಂಡಿದ್ದಾನೆ.
ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.  ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!