ರಾಯಚೂರು

'ಕುಡಿವ ನೀರು ವ್ಯವಸ್ಥೆ ಕಲ್ಪಿಸಿ'

ಲಿಂಗಸ್ಗೂರು: ತಾಲೂಕಿನ ನಿಲೋಗಲ್ ಗ್ರಾಮಕ್ಕೆ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ತಹಸೀಲ್ದಾರ್ ರಾಮಣ್ಣ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಜಿಪಂ ಸದಸ್ಯ ಎಚ್.ಬಿ.ಮುರಾರಿ, ಜಿಪಂ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಗ್ರಾಮಸ್ಥರು, ಗ್ರಾಮದಲ್ಲಿನ ಕುಡಿಯುವ ನೀರಿನ ಮೂಲ ಆಕರಗಳೆಲ್ಲ ಬತ್ತಿ ಹೋಗಿ ಇತ್ತೀಚೆಗೆ ಕುಡಿಯುವ ನೀರು ಸಮಸ್ಯೆ ಎದುರಾಗಿದ್ದು, ಇದರಿಂದ ಜನ-ಜಾನುವಾರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
 ಬೇಸಿಗೆ ಸಮೀಪಿಸುತ್ತಿದ್ದು, ಕುಡಿಯುವ ನೀರಿನ ಗಂಭೀರ ಪರಿಸ್ಥಿತಿ ಉಲ್ಬಣಿಸುವ ಮುನ್ನ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಗ್ರಾಮಸ್ಥರಾದ ಬೀರಪ್ಪ ಪೂಜಾರಿ, ಅಮರೇಶ, ಬಾಳಪ್ಪ, ಹುಲಿಗೇಶ, ಮೌಲಪ್ಪ, ಹುಸೇನಪ್ಪ, ಅರಳಪ್ಪ, ನಿಂಗಪ್ಪ, ಅಮರಮ್ಮ, ಭಾಗಮ್ಮ, ಹುಸೇನಮ್ಮ, ಮಲ್ಲಮ್ಮ ಇನ್ನಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ