ರಾಯಚೂರು

ನಾಳೆ ರೆಡ್‌ಕ್ರಾಸ್ ಘಟಕ ಉದ್ಘಾಟನೆ

ರಾಯಚೂರು: ಇಲ್ಲಿನ ಕೃಷಿ ವಿವಿಯಲ್ಲಿ ಫೆ. 9ರಂದು ಯುವರೆಡ್ ಕ್ರಾಸ್ ಘಟಕದ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11ಕ್ಕೆ ಯುವ ರೆಡ್‌ಕ್ರಾಸ್ ಘಟಕವನ್ನು ಬೆಂಗಳೂರು ಯುವ ರೆಡ್‌ಕ್ರಾಸ್ ರಾಜ್ಯ ಸಂಚಾಲಕ ಡಾ. ಎಂ.ಆರ್. ಕುಲಕರ್ಣಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಯಚೂರು ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಸಭಾಪತಿ ಸುಭಾಷರೆಡ್ಡಿ ಪಾಟೀಲ್ ಪಾಲ್ಗೊಳ್ಳುವರು. ಜಿಪಂ ಸಿಇಒ ಜ್ಞಾನಪ್ರಕಾಶ್ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೃಷಿ ವಿವಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಮುಖ್ಯಸ್ಥ, ಡೀನ್ ಡಾ. ಎ.ನಾಗನಗೌಡ ವಹಿಸುವರು ಎಂದು ಕೃಷಿ ವಿವಿ ತಿಳಿಸಿದೆ.
ನಾಳೆ ಸಮಾವೇಶ
ರಾಯಚೂರು: ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ನಗರದಲ್ಲಿ ಫೆ.9ರಂದು ಜಿಲ್ಲಾ ಮಟ್ಟದ ಸಮಾವೇಶ ಆಯೋಜಿಸಲಾಗಿದೆ.ಅಂದು ಬೆಳಗ್ಗೆ ನಗರದ ಸರ್ಕಾರಿ ನೌಕರರ ಸಂಘದ ಮನರಂಜನಾ ಕೇಂದ್ರದಲ್ಲಿ ಸಮಾವೇಶ ನಡೆಯಲಿದ್ದು, ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ರಾಜ್ಯ ಕಾರ್ಯದರ್ಶಿ ವಿಜಯಭಾಸ್ಕರ್, ರಾಜ್ಯ ಉಪಾಧ್ಯಕ್ಷ ಸೋಮಶೇಖರ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.ಫೆ.20, 21ರಂದು ನಡೆಯಲಿರುವ ಅಖಿಲ ಭಾರತ ಮುಷ್ಕರದ ಅಂಗವಾಗಿ ನಡೆಯಲಿರುವ ಈ ಸಮಾವೇಶದಲ್ಲಿ ಎಲ್ಲ ಕಾರ್ಮಿಕ ಸಂಘಗಳ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಸಂಘಟನೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ಯುವಮುಖಂಡರು ಕೆಜೆಪಿಗೆ ಸೇರ್ಪಡೆ
ಸಿಂಧನೂರು: ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಯುವ ಮುಖಂಡರಾದ ಸಂದೀಪ್ ಪಾಟೀಲ್ ಹಾಗೂ ಲಿಂಗರಾಜ ಹೂಗಾರ ನೇತೃತ್ವದಲ್ಲಿ ಸುಮಾರು 70ಕ್ಕೂ ಹೆಚ್ಚು ಜನ ಕೆಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.  ಮುಖಂಡರಾದ ಮಲ್ಲನಗೌಡ ಮಲ್ಕಾಪುರ, ಲತೀಫ್ ಸಾಲಗುಂದ, ಕೃಷ್ಣಗೌಡ, ಕೆ.ವೀರೇಶ, ಹೆಚ್. ಪರಶುರಾಮ, ಟಿ.ಮಾರುತಿ, ಎ.ಶರಣಪ್ಪ   ಇದ್ದರು.
ದಲಿತ ಮುಖಂಡಗೆ ಇಂದು ಶ್ರದ್ಧಾಂಜಲಿ
ರಾಯಚೂರು: ದಲಿತ ಸಂಘರ್ಷ ಸಮಿತಿಯ ಮುಖಂಡ, ಹೋರಾಟಗಾರ ದಿ.ಶಾಂತಪ್ಪ ದೊಡ್ಡಿ ಮಾನವಿ ಅವರಿಗೆ ನಗರದಲ್ಲಿ ಫೆ.8ರಂದು ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ.ಈ ಕುರಿತು ಪ್ರಕಟಣೆ ನೀಡಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ)ಯ ಮುಖಂಡರಾದ ರವೀಂದ್ರನಾಥ ಪಟ್ಟಿ ಮತ್ತು ಎಂ.ಈರಣ್ಣ, ನಗರದ ಮನೋರಂಜನಾ ಕೇಂದ್ರದಲ್ಲಿ ಫೆ.8ರಂದು ಮಧ್ಯಾಹ್ನ 12ಕ್ಕೆ ಶ್ರದ್ಧಾಂಜಲಿ ಸಭೆ ಏರ್ಪಡಿಸಿದ್ದು, ಸಭೆಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಮೋಹನ್ ರಾಜ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ