ರಾಯಚೂರು

ಆರೋಗ್ಯ ಇಲಾಖೆ ಬೇರ್ಪಡಿಸಿ

ಲಿಂಗಸ್ಗೂರು: ಜಿಲ್ಲಾ ಪಂಚಾಯಿತಿಯಿಂದ ಆರೋಗ್ಯ ಇಲಾಖೆಯನ್ನು ಬೇರ್ಪಡಿಸಬೇಕೆಂದು ಒತ್ತಾಯಿಸಿ ಸರ್ಕಾರಿ ವೈದ್ಯರು, ನೌಕರರು ಹಾಗೂ ಆರೋಗ್ಯ ಸಹಾಯಕಿಯರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಸ್ಥಳೀಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಮುಷ್ಕರ ಆರಂಭಿಸಿದ ಅವರು, ಸರ್ಕಾರಿ ವೈದ್ಯರು, ನೌಕರರು ಹಾಗೂ ಆರೋಗ್ಯ ಸಹಾಯಕಿಯರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಸ್ಪಂದನೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಹೋರಾಟಕ್ಕೆ ಮುಂದಾಗಿರುವುದಾಗಿ ತಿಳಿಸಿದರು.
ಬೇಡಿಕೆಗಳು: ಎಲ್ಲ ಜಿಲ್ಲಾ ಆಸ್ಪತ್ರೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾಯಿಸಬೇಕು. ಜಿಲ್ಲಾ ಪಂಚಾಯಿತಿಯಿಂದ ಆರೋಗ್ಯ ಇಲಾಖೆಯನ್ನು ಬೇರ್ಪಡಿಸಬೇಕು. ಪ್ರತಿ ತಿಂಗಳು 1ನೇ ತಾರೀಖಿನಂದು ತಪ್ಪದೇ ವೇತನ ಪಾವತಿಸಬೇಕು. ವೇತನ ತಾರತಮ್ಯ ನಿವಾರಿಸಬೇಕು. ಇಲಾಖೆ ತಂದಿರುವ ವರ್ಗಾವಣೆ ಕಾಯಿದೆಯನ್ನು ಸೂಕ್ತ ತಿದ್ದುಪಡಿ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮುಷ್ಕರದಲ್ಲಿ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶಿವಬಸಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ ಕುಮಾರ, ವೈದ್ಯಾಧಿಕಾರಿಗಳಾದ ಡಾ. ಚಂದ್ರಬಾಬು, ಡಾ. ರುದ್ರಗೌಡ, ಡಾ. ಕಡದಳ್ಳಿ, ಡಾ. ದಿಗಂಬರ, ಎಕ್ಸ್-ರೇ ವಿಭಾಗದ ರಮೇಶ, ಫಕೀರಪ್ಪ, ಚನ್ನಬಸನಗೌಡ, ನೌಕರ ಸುಭಾಷ ಬಳಮಕರ, ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕಿಯರಾದ ಅಂಬಮ್ಮ, ರತ್ನ, ಗುರಮ್ಮ, ಗೀತಾ ಪಾಟೀಲ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಆಯ್ಕೆ ಸಮಿತಿ ಅಧ್ಯಕ್ಷರ ಆಯ್ಕೆ ಕಸರತ್ತು; BCCI ಆಫರ್ ತಿರಸ್ಕರಿಸಿದ ಸ್ಟಾರ್‌ ಗಳು, 100 ಟೆಸ್ಟ್‌ ಅನುಭವಿ ಆಟಗಾರರಿಂದಲೇ ನಕಾರ?

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ