ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕೊರಮ ಸಮಾಜಕ್ಕೆ ಪ್ರತ್ಯೇಕ ಸಂಸ್ಥೆ ರಚನೆ: ಸಂಭ್ರಮಾಚರಣೆ

Parashurama
Updated On : 10 Feb 2013, 10:51 am

ಲಿಂಗಸ್ಗೂರು: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಕೊರಮ (ಕೊರಚ) ಸಮಾಜಕ್ಕೆ ಪ್ರತ್ಯೇಕ ಸಂಸ್ಥೆ ರಚನೆ ಮಾಡಲು ನಿರ್ಧರಿಸುವ ಮೂಲಕ 5 ಕೋಟಿ ಮೀಸಲಿರಿಸಿದ ಸುದ್ದಿ ತಿಳಿದ ಸಮಾಜದವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ಸಂಭ್ರಮ ಆಚರಿಸಿದ ಸಮಾಜದವರು ಮುಖ್ಯಮಂತ್ರಿಗಳು ಇತ್ತಿಚಿಗೆ ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಮಟ್ಟದ ಸಮಾವೇಶದಲ್ಲಿ ಪ್ರತ್ಯೇಕ ಸಂಸ್ಥೆ ರಚನೆ ಮಾಡುವ ಕುರಿತು ಭರವಸೆ ನೀಡಿದ್ದರು. ಅದರಂತೆ ಬಜೆಟ್‌ನಲ್ಲಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಾಜದ ರಾಜೇಶ ಮಾಣಿಕ್, ಯಲ್ಲಪ್ಪ ಕುರಕುಂದಿ, ವೀರೇಶ ಭಜಂತ್ರಿ, ಪಂಪಣ್ಣ ಭಜಂತ್ರಿ, ಬಸವರಾಜ ಮೆದಿಕಿನಾಳ, ಹನುಮಂತ ಆಮದಿಹಾಳ, ರಾಘವೇಂದ್ರ ಭಜಂತ್ರಿ, ಕುಪ್ಪಣ್ಣ ಚಿಂಚರಕಿ, ಛತ್ರಪ್ಪ ಕನ್ನಾಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments