ರಾಯಚೂರು

'ತಾರತಮ್ಯದಿಂದ ಉದ್ಯೋಗ ಕುಂಠಿತ'

ರಾಯಚೂರು: ಸರ್ಕಾರಗಳ ತಾರತಮ್ಯದಿಂದಾಗಿ ರಾಜ್ಯದ ಈ ಭಾಗವು ಔದ್ಯೋಗಿಕ ಕ್ಷೇತ್ರದಲ್ಲಿ ತೀರಾ ಹಿಂದುಳಿದಿದೆ. ಉತ್ತರ ಕರ್ನಾಟಕ ಬೆಳಗಾವಿ, ಹುಬ್ಬಳ್ಳಿಗಳಿಗೆ ಹೋಲಿಸಿದರೆ ಜಿಲ್ಲೆಯು ಉದ್ಯೋಗವಕಾಶದಲ್ಲಿ ತೀರಾ ಹಿಂದಿದೆ. ಇದಕ್ಕೆ ಸರ್ಕಾರಗಳೇ ಕಾರಣ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಶಿವನಗೌಡ ನಾಯಕ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿಗೆ ಸಮೀಪದ ಯರಮರಸ್‌ನಲ್ಲಿ ಶನಿವಾರ ಗ್ರಾಮೀಣ ಕ್ಷೇತ್ರದ ನಿಯೋಜಿತ ಬಿಜೆಪಿ ಅಭ್ಯರ್ಥಿ ತಿಪ್ಪರಾಜು ನೇತೃತ್ವದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ, ಈ ಭಾಗದಲ್ಲಿ ಉದ್ಯೋವಕಾಶಗಳ ಕೊರತೆಯಿಂದ ಅನೇಕರು ಉನ್ನತ ವ್ಯಾಸಂಗ ಮಾಡಿಯೂ ಉದ್ಯೋಗವಿಲ್ಲದೇ ಪರದಾಡುವಂತಾಗಿದೆ ಎಂದು ಹೇಳಿದರು.
ಪಕ್ಷಾತೀತವಾಗಿ ಶ್ರಮಿಸಬೇಕು: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಎಲ್ಲರೂ ಶ್ರಮಿಸುವ ಅವಶ್ಯಕತೆಯಿದೆ. ಯುವ ಜನರಿಗೆ ಉದ್ಯೋಗವಕಾಶ ಸೃಷ್ಟಿಸುವ  ಮೂಲಕ ಆರ್ಥಿಕ ಅಭಿವೃದ್ಧಿಗೆ ಕಾರಣರಾಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಿ ಉದ್ಯೋಗವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡಿದೆ ಎಂದು ಹೇಳಿದರು.
ರಾಜ್ಯದ ಬಿಜೆಪಿ ಸರ್ಕಾರದ ಬಜೆಟ್‌ನಲ್ಲಿ ಹೈ.ಕ. ಭಾಗದ ಅಭಿವೃದ್ಧಿಗೆ ಸೂಕ್ತ ಅನುದಾನ ಒದಗಿಸಿದೆ. ಜಿಪಂ ಮತ್ತು ಸ್ಥಳೀಯ ಸಂಸ್ಥೆಗಳಿಗೆ 3,900 ಕೋಟಿ ಅನುದಾನ ನಿಗದಿ ಮಾಡಲಾಗಿದೆ. ಸಿರವಾರ ಮತ್ತು ಮಸ್ಕಿ ತಾಲೂಕು ಕೇಂದ್ರಗಳಾಗುವ ಮೂಲಕ ಅಭಿವೃದ್ಧಿಗೆ ದಾರಿಯಾಗಲಿದೆ ಎಂದು ಹೇಳಿದರು.
ದೇವದುರ್ಗ ಕ್ಷೇತ್ರಾಭಿವೃದ್ದಿಗೆ 2 ಸಾವಿರ ಕೋಟಿ ವೆಚ್ಚ: ಹೈ.ಕ. ಭಾಗದಲ್ಲಿ ವಿಶೇಷ ಸ್ಥಾನಮಾನ ಜಾರಿಯಾಗುವವರೆಗೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸದಂತೆ ಸಿಎಂ ಅವರಿಗೆ ಒತ್ತಾಯಿಸುವುದಾಗಿ ತಿಳಿಸಿದ ಅವರು, ದೇವದುರ್ಗ ವಿಧಾನಸಭೆ ಕ್ಷೇತ್ರದಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ದೇವದುರ್ಗದ ಮಾದರಿಯಲ್ಲಿಯೇ ಮುಂದಿನ ದಿನಗಳಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿಯೂ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಚಾಲನೆ ನೀಡಲಾಗುತ್ತದೆ. ಬಿಜೆಪಿ ಮುಖಂಡ ತಿಪ್ಪರಾಜು ಅವರು ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂದು ಹೇಳಿದರು. ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ತ್ರಿವಿಕ್ರಮ್ ಜೋಷಿ, ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಅಧ್ಯಕ್ಷ ಅಶೋಕ ಗಸ್ತಿ, ಕೃಷ್ಣಾ ಕಾಡಾದ ಅಧ್ಯಕ್ಷ ಗಿರೀಶ್ ಮಟ್ಟೆಣ್ಣವರ್ ಮಾತನಾಡಿದರು.
ಕಿಲ್ಲೆಬ್ರಹನ್ಮಠದ ಶಾಂತಮಲ್ಲ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ನಿಯೋಜಿತ ಅಭ್ಯರ್ಥಿ ತಿಪ್ಪರಾಜು, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಶಿವರಾಜ್ ಮರ್ಚೆಟ್ಹಾಳ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಅಮರೇಶ್ ಹೊಸಮನಿ, ಎಪಿಎಂಸಿ ಅಧ್ಯಕ್ಷ ಆರ್.ತಿಮ್ಮಯ್ಯ, ಕಡಗೋಲ ಆಂಜನೇಯ  ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ