ಧಾರ್ಮಿಕ ಕಾರ್ಯಕ್ರಮ
ರಾಯಚೂರು: ನಗರದ ಅಂದ್ರೂನ್ ಕಿಲ್ಲಾ ಪ್ರದೇಶದ ಅಂಜುಮನೆ ಗುಲಾಮಾನೆ ಮುಸ್ತಫಾ ಸಂಸ್ಥೆಯಿಂದ ಫೆ.10ರಂದು ಮುಸ್ಲಿಂ ಸಮಾಜದ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಮುಖ ಮಹ್ಮದ್ ಸಾಜಿದ್ ಅಲಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿ, ನಗರದ ಮಹಿಳಾ ಸಮಾಜದಲ್ಲಿ ಫೆ.10ರ ರಾತ್ರಿ 8.30ಕ್ಕೆ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು, ಈ ಸಭೆಯಲ್ಲಿ ದೆಹಲಿಯ ಸೈಯದ್ ಫಜ್ಲುಲ್ಲಾಹ್ ಚಿಸ್ತಿ ಸಾಬ್ರೀ ಸಾಬ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಅವರು ಮನವಿ ಮಾಡಿದ್ದಾರೆ.
ಸಂತ್ರಸ್ತರಿಗೆ ಮನೆ ಹಕ್ಕು ಪತ್ರ ವಿತರಣೆ
ಸಿಂಧನೂರು: ತಾಲೂಕಿನ ಒಳಬಳ್ಳಾರಿ ಗ್ರಾಮದಲ್ಲಿ 2009ರಲ್ಲಿ ಬಿದ್ದ ಮಳೆಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಆಶ್ರಯ ಯೋಜನೆಯಲ್ಲಿ ಮನೆಯ ಹಕ್ಕು ಪತ್ರಗಳನ್ನು ಶಾಸಕ ವೆಂಕಟರಾವ್ ನಾಡಗೌಡ ವಿತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರು ಬಳಸಿಕೊಳ್ಳಬೇಕು. ಸಂತ್ರಸ್ತ ಕುಟುಂಬದ ಯುವಕರು ವಿದ್ಯಾವಂತರಾಗಬೇಕು. ಅಂದಾಗ ಮಾತ್ರ ಸಮೃದ್ಧಿ ಜೀವನ ನಡೆಸಲು ಸಾಧ್ಯ. ಲಭ್ಯವಿರುವ ಅವಕಾಶ ಬಳಸಿಕೊಂಡು ಸಂತ್ರಸ್ತ ಕುಟುಂಬದವರು ಉತ್ತಮ ಪ್ರಗತಿ ಸಾಧಿಸಬೇಕು. ಉನ್ನತ ಹಂತ ತಲುಪಬೇಕು ಎಂದು ಅವರು ತಿಳಿಸಿದರು. ಇದೇ ವೇಳೆ ಎಪಿಎಂಸಿ ಸದಸ್ಯ ರಾಂಬಾಬು, ತಾಪಂ ಸದಸ್ಯ ಚಂದ್ರಭೂಪಾಲ ನಾಡಗೌಡ, ಗ್ರಾಪಂ ಅಧ್ಯಕ್ಷ ಉಪ್ಪಳಪ್ಪ, ಸದಸ್ಯರಾದ ಗ್ಯಾನಪ್ಪ, ಉಪ್ಪಳಪ್ಪ, ಜೆಡಿಎಸ್ ವಕ್ತಾರ ಬಸವರಾಜ ನಾಡಗೌಡ, ಶಂಕ್ರಯ್ಯ ಸ್ವಾಮಿ, ಉಪ ತಹಸೀಲ್ದಾರ್ ಪ್ರಕಾಶ್, ಯಂಕಪ್ಪ, ಮತ್ತಿತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.