ಅಂಗನವಾಡಿ ಮಕ್ಕಳ ಹುಟ್ಟುಹಬ್ಬ ಆಚರಣೆ
ಗುಲ್ಬರ್ಗ: ತಾಲೂಕಿನ ನಾಗಡದಿನ್ನಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಈಚೆಗೆ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು.ಗ್ರಾಮದ ಪ್ರೌಢಶಾಲೆಯ ಮುಖ್ಯಗುರು ಶ್ರೀನಿವಾಸ ಯಳವಾರ ಮಾತನಾಡಿ, ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಿಸುತ್ತಿರುವುದು ಸಂತಸತ ಸಂಗತಿ ಎಂದರು.
ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಅದು ಎಲ್ಲರ ಜವಾಬ್ದಾರಿಯಾಗಿದೆಂದು ಹೇಳಿದರು. ಹೈ.ಕ. ವಿಮೋಚನಾ ವೇದಿಕೆ ಅಧ್ಯಕ್ಷ ರಾಮಣ್ಣ ಎನ್.ಗಣೇಕಲ್ ಮಾತನಾಡಿದರು.