ನಾಗರಿಕರ ಹಕ್ಕು: ಕಾರ್ಯಕ್ರಮ ಯಶಸ್ವಿ
ರಾಯಚೂರು: ನಗರದ ಜನಹಿತ ಸಂಸ್ಥೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಈಚೆಗೆ ಹಿರಿಯ ನಾಗರಿಕರ ಸೌಲಭ್ಯ ಮತ್ತು ಹಕ್ಕುಗಳ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರಭಾರಿ ಜಿಲ್ಲಾಧಿಕಾರಿ ಮಂಜುಶ್ರೀ ಮಾತನಾಡಿ, ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಹಕ್ಕು ಉಲ್ಲಂಘನೆಯಾದ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದ ಅವರು, ವೃದ್ಧಾಶ್ರಮವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಟ್ರಾನ್ಸೇಸಿಯಾ ಸಂಸ್ಥೆಯ ಯೋಜನಾ ವ್ಯವಸ್ಥಾಪಕ ಸಂತೋಷ್ ಎಂ, ಹೆಲ್ಪ ಏಜ್ ಇಂಡಿಯಾ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಪ್ರಕಾಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಲ್ಲಾಸ್, ಭೀಮರಾವ್ ದೇಶಪಾಂಡೆ, ರಮೇಶ್ ರೆಡ್ಡಿ, ಸಂಗಪ್ಪ ಗಣೇಕಲ್, ನಾಗವೇಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಹಿರಿಯ ನಾಗರಿಕರು ಸರ್ಕಾರಿ ಸೇವಾ ನಿವೃತ್ತರು ಸೇರಿದಂತೆ ಮತ್ತಿತರರು ಸಮಾರಂಭದಲ್ಲಿದ್ದರು.