ಗುರುಭವನ ಅಪೂರ್ಣ: ಕ್ರಮಕ್ಕೆ ಜೆಡಿಎಸ್ ಆಗ್ರಹ
ರಾಯಚೂರು: ಮಾನವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಿಸಿದ ಗುರುಭವನ ಕಟ್ಟಡವು ಅಪೂರ್ಣಗೊಂಡಿದ್ದು ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಎಸ್ಸಿ, ಎಸ್ಟಿ ಯುವಘಟಕದ ಜಿಲ್ಲಾ ಕಾರ್ಯಾಧ್ಯಕ್ಷ ನವೀನಕುಮಾರ್ ಕುರ್ಡಿ ಆರೋಪಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಅವರು, 2008- 09ನೇ ಸಾಲಿನಲ್ಲಿ ಮಾನವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಗುರುಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. 34.54 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದಿಂದ ಕಾಮಗಾರಿ ಆರಂಭಿಸಿದ್ದು, ಅಪೂರ್ಣಗೊಂಡಿದೆ ಎಂದು ದೂರಿದ್ದಾರೆ.
ಕಾಮಗಾರಿ ಆರಂಭಗೊಂಡು ಐದು ವರ್ಷ ಕಳೆದರೂ ನಿರ್ಮಿತಿ ಕೇಂದ್ರ ಕಾಮಗಾರಿ ಪೂರ್ಣಗೊಳಿಸಿದೇ ಅರ್ಧಕ್ಕೆ ಕೈಬಿಟ್ಟಿದೆ. ಇದರಿಂದ ಕಟ್ಟಡ ಹಾಳಾಗುತ್ತಿದೆ. ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಅನುದಾನದ ದುರ್ಬಳಕೆ ಮಾಡಿಕೊಂಡಿರುವ ನಿರ್ಮಿತಿ ಕೇಂದ್ರದ ಜಿಲ್ಲಾ ವ್ಯವಸ್ಥಾಪಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.