ದೇಶವ್ಯಾಪಿ ಮುಷ್ಕರ ಬೆಂಬಲಿಸಲು ಮನವಿ
ರಾಯಚೂರು: ಕಾರ್ಮಿಕ ಸಂಘಟನೆಯ ಕರೆಯ ಮೇರೆಗೆ ಫೆ.20, 21ರಂದು ನಡೆಯಲಿರುವ ದೇಶವ್ಯಾಪಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಮುಷ್ಕರಕ್ಕೆ ಎಲ್ಲ ಕಾರ್ಮಿಕರು ಬೆಂಬಲಿಸುವಂತೆ ಮನವಿ ಮಾಡಲಾಗಿದೆ.
ರಾಜ್ಯ ಅಸಂಘಟಿತ ವಲಯ ಕಾರ್ಮಿಕರ ಸಂಘದ ಅಧ್ಯಕ್ಷ ಶ್ರೀನಿವಾಸುಲು ಪ್ರಕಟಣೆ ನೀಡಿ, ಫೆ.20 ಮತ್ತು 21ರಂದು ದೇಶಾದ್ಯಂತ 10 ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಈ ಮುಷ್ಕರಕ್ಕೆ ಎಐಎಫ್ಟಿಯು ಬೆಂಬಲಿಸಿದೆ. ಜಿಲ್ಲೆಯ ವಿವಿಧ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಸಜ್ಜಾಗಲು ಮನವಿ ಮಾಡಿದ್ದಾರೆ. ದೇಶವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಫೆ.19ರಂದು ಪಂಜಿನ ಮೆರವಣಿಗೆ ಆಯೋಜಿಸಿದ್ದು, ಹೋರಾಟ ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.