ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ರಾಜ್ಯ ಬಜೆಟ್ ಕಾರ್ಮಿಕ ವಿರೋಧಿ; ಮಾಸ್ತರ್ ಟೀಕೆ

Parashurama
Updated On : 14 Feb 2013, 11:48 am

ರಾಯಚೂರು: ರಾಜ್ಯದ ಬಜೆಟ್‌ನಲ್ಲಿ ಅಸಂಘಟಿತ ವಲಯದ ಕಾರ್ಮಿಕರನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ವಿ.ಎಚ್. ಮಾಸ್ತರ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಠಗಳಿಗೆ, ಶ್ರೀಮಂತರಿಗೆ ಅಗಣಿತ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಅದಕ್ಕೆ ವಿರುದ್ಧವಾಗಿ ಬಡವರಿಗೆ, ಅಸಂಘಟಿತ ವಲಯದ ಕಾರ್ಮಿಕರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಸಿಎಂ ಜಗದೀಶ್ ಶೆಟ್ಟರ್ ಪ್ರಕಟಿಸಿಲ್ಲ ಎಂದು ಟೀಕಿಸಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರದ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು. ಸರ್ಕಾರದ ಬಜೆಟ್ ಉಳ್ಳವರ ಪಲ್ಲಕ್ಕಿ ಹೊರುವ ದಿವಾಳಿತನವನ್ನು ಪ್ರದರ್ಶಿಸಿದೆ. ಸರ್ಕಾರದ ಈ ರೀತಿಯ ಕಾರ್ಮಿಕ ವಿರೋಧಿ ವರ್ತನೆಯಲ್ಲಿ ಅಸಂಘಟಿತ ವಲಯದ ಕಾರ್ಮಿಕರ ಸಂಘ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments