'ಶಿವನಗೌಡ ಬೆಂಬಲಿಗರಿಂದ ಅಕ್ರಮ'
ರಾಯಚೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಿವನಗೌಡ ನಾಯಕರ ಬೆಂಬಲಿಗರು ಸರ್ಕಾರದ 65 ಲಕ್ಷ ಕೊಳ್ಳೆ ಹೊಡೆದಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಫೆ. 15ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜೆಡಿಎಸ್ ವಿವಿಧ ಘಟಕಗಳು ಸತ್ಯಾಗ್ರಹ ನಡೆಸಲಿವೆ.
ಈ ಕುರಿತು ಪ್ರಕಟಣೆ ನೀಡಿರುವ ಜೆಡಿಎಸ್ ದೇವದುರ್ಗ ಘಟಕದ ಪದಾಧಿಕಾರಿಗಳು, ಸಿಎಂ ರಾಜಕೀಯ ಕಾರ್ಯದರ್ಶಿಯ ಬೆಂಬಲಿಗರಾದ ಗುರುರಾಜ್ ದೇಸಾಯಿ ಮತ್ತು ಶಾಮರಾವ್ ಕುಲಕರ್ಣಿ ಅವರು ರಾಜೀವಗಾಂಧಿ ವಸತಿ ಯೋಜನೆಗೆ ಜಮೀನು ನೀಡಿಕೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿದ್ದಾರೆ.
ಸುಮಾರು 20 ವರ್ಷದಷ್ಟು ಹಿಂದೆಯೇ ಭೂಮಾಲಿಕರು ಆಯಾ ಗ್ರಾಮಗಳ 150ರಿಂದ 250 ಕುಟುಂಬಗಳಿಗೆ ಮಾರಾಟ ಮಾಡಿದ ಜಮೀನನ್ನು ವಸತಿ ಯೋಜನೆಗೆ ಪುನಾ ಮಾರಾಟ ಮಾಡಿದ್ದು, ಈ ಬಗ್ಗೆ 2012ರ ಡಿ. 18ರಂದು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಗಳು ಮೌನ ವಹಿಸಿರುವುದನ್ನು ಖಂಡಿಸಿ ಫೆ.15ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.