ರಾಯಚೂರು

ನಾಳೆ ಬಿಎಸ್‌ವೈ ಪ್ರವಾಸ

ಬೀದರ್: ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಫೆ.19ರಂದು ಬೀದರ್ ಪ್ರವಾಸ ಕೈಗೊಂಡಿದ್ದಾರೆ.
  ಈ ಕುರಿತು ಪಕ್ಷದ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಸೋಮನಾಥ ಪಾಟೀಲ್ ಪ್ರಕಟಣೆ ಹೊರಡಿಸಿದ್ದು, ಫೆ. 19ರಂದು ಬೆಳಿಗ್ಗೆ 9.30ಕ್ಕೆ ಗುಲ್ಬರ್ಗದಿಂದ ಹೆಲಿಕಾಪ್ಟರ್ ಮೂಲಕ ಬೀದರ್‌ಗೆ ಆಗಮಿಸುವರು. ಅಂದು ಬೀದರ್‌ನ ಶಿವನಗರದ ಪಾಪನಾಶ ಗೇಟ್ ಹತ್ತಿರ ನಿರ್ಮಾಣಗೊಂಡಿರುವ ನೂತನ ಕಟ್ಟಡದಲ್ಲಿ ಜಿಲ್ಲಾ ಕೆಜೆಪಿ ಕಚೇರಿಯನ್ನು ಉದ್ಘಾಟಿಸುವರು.
  ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕೆಜೆಪಿ ರಾಜ್ಯ ಉಪಾಧ್ಯಕ್ಷರಾದ ಗುರುಪಾದಪ್ಪ ನಾಗಮಾರಪಳ್ಳಿ ಹಾಗೂ ಸುಭಾಷ ಕಲ್ಲೂರ್, ರಾಜ್ಯ ಕಾರ್ಯದರ್ಶಿ ಶಕುಂತಲಾ ಬೆಲ್ದಾಳೆ, ವಿಭಾಗೀಯ ಕಾರ್ಯದರ್ಶಿ ಸುಭಾಷ ಬಿರಾದಾರ, ಜಿಲ್ಲಾಧ್ಯಕ್ಷ ವಿಜಯಕುಮಾರ ಕಣಜಿ, ಪ್ರಚಾರ ಸಮಿತಿ ಅಧ್ಯಕ್ಷ ಸೋಮನಾಥ ಸೋಲಾಪುರೆ, ಪಕ್ಷದ ಎಲ್ಲಾ ಘೋಷಿತ ಅಭ್ಯರ್ಥಿಗಳು ಪಾಲ್ಗೊಳ್ಳುವರು.
  ಪಕ್ಷದ ಎಲ್ಲಾ ಜಿಲ್ಲಾ ಪದಾಧಿಕಾರಿಗಳು, ಘಟಕ ಹಾಗೂ ತಾಲೂಕಾ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕೆಂದು ಪಾಟೀಲ್ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್